ಹಾವೇರಿ ವಿದ್ಯಾರ್ಥಿನಿ ರೇಪ್-ಮರ್ಡರ್ : ಆರೋಪಿಗಳ ಪತ್ತೆಗೆ ಗೃಹಚಿವರ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Haveri-Girl-Rape-Murder
ಬೆಂಗಳೂರು,ಆ.11- ಹಾವೇರಿಯಲ್ಲಿ ವಿದ್ಯಾರ್ಥಿಯೊಬ್ಬಳ ಮೇಲೆ ನಡೆದಿರುವ ಅತ್ಯಾಚಾರ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಎಡೆಮುರಿ ಕಟ್ಟುವಂತೆ ಸೂಚಿಸಲಾಗಿದೆ ಎಂದು ಗೃಹಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಯಾವುದೇ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ. ಇಂತಹ ದುಷ್ಕøತ್ಯ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಮೃತ ಯುವತಿಯನ್ನು 17 ವರ್ಷದ ವಿದ್ಯಾರ್ಥಿನಿ ಸವಣೂರು ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ತಾಲೂಕಿನ ವರದಹಳ್ಳಿ ಬ್ರಿಡ್ಜ್ ಕೆಳಗಿರುವ ಪೊದೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು.
ಸವಣೂರು ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ರೇಣುಕಾ ಪಾಟೀಲ್, ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ರೇಣುಕಾ ಎಂದಿನಂತೆ ಕಾಲೇಜಿಗೆ ತೆರಳಿದ್ದಳು. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಕಳವಳಗೊಂಡ ಪೋಷಕರು ಹಾವೇರಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದಾಗ ಅರೆಬೆಂದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿತ್ತು. ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ರೇಣುಕಾ ಪಾಟೀಲ್ ರನ್ನು ದುಷ್ಕರ್ಮಿಗಳು ಅಪಹರಿಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರ ಮಾಡಿ ಜೀವಂತ ಸುಟ್ಟುಹಾಕಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin