ಪ್ರವಾಹದ ಭೀತಿ : ಕಾವೇರಿ ತೀರದ ಗ್ರಾಮಗಳಿಗೆ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

kaveri-teera
ಕೊಳ್ಳೆಗಾಲ, ಆ.11- ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ತಾಲ್ಲೂಕಿನ ನದಿ ತೀರದ ಗ್ರಾಮಗಳು ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗುವ ಆತಂಕ ಎದುರಾಗಿದೆ. ಕಳೆದೊಂದು ತಿಂಗಳಿನಿಂದ ಕೇರಳದ ಕರಾವಳಿ ತೀರದ ಜಿಲ್ಲೆಗಳಲ್ಲಿ ವರುಣ ನಿರಂತರವಾಗಿ ಆರ್ಭಟಿಸುತ್ತಿರುವುದರಿಂದ ಕೇರಳದ ಇಡುಕ್ಕಿ ಜಲಾಶಯ ತುಂಬಿ ಭರ್ತಿಯಾಗಿ ಜಲಾಶಯದಿಂದ ನೀರು ಹೊರ ಹೊಮ್ಮತ್ತಿರುವುದರಿಂದ ಅದಾಗಲೇ ತುಂಬಿ ಭರ್ತಿಯಾಗಿರು ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ಜಲಾಶಯದಿಂದ ಕಬಿನಿ ನದಿಗೆ 80 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿ ಬಿಡಲಾಗುತ್ತಿದೆ.

ಇದರಿಂದ ತಾಲ್ಲೋಕಿನ ಮುಳ್ಳೂರು, ಹಳೇ ಹoಪಾಪುರ, ಯಡಕುರಿಯಾ ಗ್ರಾಮಗಳಲ್ಲಿ ಮತ್ತೊಮ್ಮೆ ಆತಂಕ ಮನೆ ಮಾಡಿದೆ.ಅಣೆಕಟ್ಟೆಗಳಿಂದ ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿ ಬಿಡುತ್ತಿರುವುದರಿ0ದ ನದಿಯಲ್ಲಿ ಪ್ರವಾಹದ ಯಾವುದೇ ಕ್ಷಣದಲ್ಲಾದರು ಅಪಾಯದ ಮಟ್ಟ ಮೀರ ಬಹುದು. ಒಂದು ವೇಳೆ ಅಂತಹ ಪರಿಸ್ಥಿತಿ ಎದುರಾದರೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಈಗಾಗಲೆ ಕಟ್ಟೆಚ್ಚರ ವಹಿಸಿದೆ. ಪರಿಸ್ಥಿತಿಗೆ ತಕ್ಕಂತೆ ಅಗತ್ಯ ಕ್ರಮ ವಹಿಸಲಿದೆ. ಆಗಾಗಿ ತೀರದ ಗ್ರಾಮಗಳ ಜನರು ಯಾವುದೇ ಕ್ಷಣದಲ್ಲಾದರು ಸ್ಥಳಾಂತರಗೊಳ್ಳಲು  ಸಿದ್ದರಿರಬೇಕು. ಅಧಿಕಾರಿಗಳು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಆಗಾಗಿ ನದಿಯಲ್ಲಿ ಪ್ರವಾಹದ ಮಟ್ಟ ತಗ್ಗುವವರೆಗೆ ನದಿ ತೀರದ ಗ್ರಾಮಗಳ ಜನರು ನದಿಯ ಬಳಿ ತೆರಳುವುದಾಗಲಿ ನೀರಿಗೆ ಇಳಿಯುವುದಾಗಿ ಮಾಡಭಾರದು. ತಮ್ಮ ಜಾನುವಾರುಗಳನ್ನು, ಮಕ್ಕಳನ್ನು ನದಿಯ ಬಳಿ ತೆರಳದಂತೆ ನೋಡಿಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಉಪ ವಿಭಾಗಾಧಿಕಾರಿ ಪೌಜಿಯಾ ತರುನ್ನಮ್ ರವರಿಗೆ ಈ ಬಗ್ಗೆ ಕಟ್ಟೆಚ್ಚರ ವಹಿಸಲು, ಅಗತ್ಯ ಬಿದ್ದರೆ ಗಂಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ತಹಶೀಲ್ದಾರ್ ಚಂದ್ರಮೌಳಿ, ರಾಜಸ್ವ ನಿರೀಕ್ಷಕ ನಿರಂಜನ್, ಗ್ರಾಮ ಲೆಕ್ಕಿಗ ರಾಕೇಶ್ ಮರಾಠ ಸೇರಿದಂತೆ ಇನ್ನಿತರ ಅಧಿಕಾರಿಗಳು ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಅಗತ್ಯ ಬಿದ್ದರೆ ಗಂಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಈಗಾಗಲೆ ಸ್ಥಳೀಯ ಗ್ರಾಮ ಪಂಚಾಯಿತಿಗಳೊಡನೆ ಸೇರಿ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಡನೆ ಪ್ರವಾಹ ಭೀತಿ ಎದುರಿಸಲು ಕ್ರಮ ವಹಿಸಿದ್ದಾರೆ.

Facebook Comments