ಆತ್ಮಹತ್ಯೆಗೆ ಯತ್ನಿಸಿದ ಗ್ಯಾಂಗ್‍ರೇಪ್ ಸಂತ್ರಸ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Poison--001
ಮುಜಾಫರ್‍ನಗರ್, ಆ.11-ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ಕಾಮುಕರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆ ಪ್ರತಿಭಟಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಗ್ಯಾಂಗ್‍ರೇಪ್ ಸಂತ್ರಸ್ತ ಮಹಿಳೆ ನಿನ್ನೆ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿರುವುದಾಗಿ ಜ್ಹಿನ್‍ಜಾನಾ ಪೊಲೀಸ್ ಠಾಣೆಯ ಅಧಿಕಾರಿ ರಾಜ್‍ಕುಮಾರ್ ಶರ್ಮ ತಿಳಿಸಿದ್ದಾರೆ.

ಇಬ್ಬರು ಕೃತ್ಯದಲ್ಲಿ ಶಾಮೀಲಾಗಿದ್ದು, ಒಬ್ಬನನ್ನು ನಿನ್ನೆ ಬಂಧಿಸಲಾಗಿದೆ. ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದರೂ ಪೊಲೀಸರು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆಕೆ ತೀವ್ರ ಖಿನ್ನತೆಗೆ ಒಳಗಾಗಿದ್ದಳು ಎಂದು ಆಕೆಯ ಕುಟುಂಬದ ಸದಸ್ಯರು ತಿಳಿಸಿದ್ದಾರೆ.  ಇಬ್ಬರು ಯುವಕರು ಮನಗೆ ನುಗ್ಗಿ ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಈ ವಿಷಯವನ್ನು ಬಾಯಿಬಿಟ್ಟರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

Facebook Comments

Sri Raghav

Admin