ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್‍ ಸವಾರ ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident

ಚನ್ನಪಟ್ಟಣ,ಆ.12-ಕ್ಯಾಂಟರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಪ್ರಕಾಶ್(24) ಮೃತಪಟ್ಟ ಯುವಕ.  ಪ್ರಕಾಶ್ ಚಿಕ್ಕಪೇಟೆಯ ದಾರದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ತನ್ನ ಸ್ನೇಹಿತರೊಂದಿಗೆ ಮಹದೇಶ್ವರ ಬೆಟ್ಟಕ್ಕೆಂದು ಬೈಕ್‍ನಲ್ಲಿ ತೆರಳುತ್ತಿದ್ದಾಗ ಚನ್ನಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಪ್ರಕಾಶ್ ಚಲಿಸುತ್ತಿದ್ದ ಬೈಕ್‍ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಪ್ರಕಾಶ್ ಕೆಳಗೆ ಬಿದ್ದು ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin