ಬೆಂಗಳೂರಲ್ಲಿ ಅನಧಿಕೃತವಾಗಿ ಪ್ಲೆಕ್ಸ್-ಬ್ಯಾನರ್ ಹಾಕಿದ 16 ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

3-Arrested
ಬೆಂಗಳೂರು, ಆ.12- ಪ್ಲೆಕ್ಸ್ ಮತ್ತು ಬ್ಯಾನರ್ ತೆರವುಗೊಳಿಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಒಂದೇ ರಾತ್ರಿ ಎರಡು ಠಾಣಾ ವ್ಯಾಪ್ತಿಯಲ್ಲಿ 16 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅನಧಿಕೃತವಾಗಿ ವಿವಿಧ ಕಡೆಗಳಲ್ಲಿ ಫ್ಲೆಕ್ಸ್ ಅಳವಡಿಸಿದ ಆರೋಪದಲ್ಲಿ ಇವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಡುಗೋಡಿ ಠಾಣಾ ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದರೆ, ಮಾರತ್‍ಹಳ್ಳಿ ಪೊಲೀಸರು 11 ಜನ ಆರೋಪಿಗಳ ಬಂಧಿಸಿದ್ದಾರೆ.

ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ ಸೇರಿ ಇತರೆ ಪ್ರತಿಷ್ಠಿತ ಕಂಪೆನಿಗಳು ಹಾಗೂ ಶಾಲಾ-ಕಾಲೇಜುಗಳ ವಿರುದ್ಧವೂ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ದೂರು ದಾಖಲಾದ ಕಂಪೆನಿಗಳ ಅಧಿಕಾರಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸರಿಂದ ಬಂಧಿತರಾಗಿರುವ ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Facebook Comments

Sri Raghav

Admin