ಮುಖ್ಯಮಂತ್ರಿ ಆಲಮಟ್ಟಿ ಭೇಟಿ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Alamatti-Dam--01

ಬೆಂಗಳೂರು, ಆ.12- ಪ್ರತಿಕೂಲ ಹವಾಮಾನದ ಕಾರಣ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆಲಮಟ್ಟಿ ಭೇಟಿ ಮುಂದೂಡಲಾಗಿದೆ. ಹುಬ್ಬಳ್ಳಿಯಲ್ಲಿ ನ್ಯಾಯಾಲಯ ಕಟ್ಟಡ ಕಾರ್ಯಕ್ರಮ ಮುಗಿಸಿ ಕೂಡಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಯವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಎರಡು ಗಂಟೆಗೂ ಹೆಚ್ಚು ಕಾಲ ಕಾದರು. ಪ್ರತಿಕೂಲ ಹವಾಮಾನದ ಕಾರಣ ಹೆಲಿಕಾಪ್ಟರ್ ಪೈಲಟ್ ಗಳು ನೀಡಿದ ಸಲಹೆಯ ಕಾರಣ ಮುಖ್ಯಮಂತ್ರಿ ಗಳು ಹಾಗೂ ಜಲ ಸಂಪನ್ಮೂಲ ಸಚಿವರು ಅನಿವಾರ್ಯವಾಗಿ ತಮ್ಮ ಆಲಮಟ್ಟಿ ಪ್ರವಾಸ ರದ್ದು ಪಡಿಸಬೇಕಾಯಿತು.ಸ್ವಾತಂತ್ರ್ಯ ದಿನಾಚರಣೆ ನಂತರ ಮತ್ತೊಮ್ಮೆ ಈ ಕಾರ್ಯಕ್ರಮ ನಿಗದಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin