ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : ಗುಂಡಿನ ಕಾಳಗದಲ್ಲಿ ಪೊಲೀಸ್ ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

Firing--000-1
ಶ್ರೀನಗರ, ಆ.12-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಟ್ಟಹಾಸ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಬಟಾಮಲೂ ಪ್ರದೇಶದಲ್ಲಿ ಭಯೋತ್ಪಾದಕರು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದು, ಕೆಲವು ಯೋಧರಿಗೆ ಗಾಯಗಳಾಗಿವೆ.

ಶ್ರೀನಗರದ ಬಟಾಮಲೂ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಭಯೋತ್ಪಾದಕರು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದು, ಸಿಆರ್‍ಪಿಎಫ್‍ನ ಮೂವರು ಯೋಧರಿಗೆ ತೀವ್ರ ಗಾಯಗಳಾಗಿವೆ. ಈ ಪ್ರದೇಶದಲ್ಲಿ ಉಗ್ರರ ದಮನ ಕಾರ್ಯಾಚರಣೆ ಮುಂದುವರಿದಿದೆ.

Facebook Comments

Sri Raghav

Admin