ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಉಗ್ರರು

ಈ ಸುದ್ದಿಯನ್ನು ಶೇರ್ ಮಾಡಿ

Trerrorist--01
ಶ್ರೀನಗರ (ಪಿಟಿಐ), ಆ.13-ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಹಿಂಸಾಚಾರ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೊಬ್ಬನನ್ನು ಅಪಹರಿಸಿದ ಉಗ್ರರು ಆತನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಪುಲ್ವಾಮಾದ ಮುರ್ರನ್ ಪ್ರದೇಶದ ಮನೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ಉಗ್ರರು ಗುಲ್ಜರ್ ಅಹಮದ್ ಭಟ್ ಎಂಬುವರನ್ನು ಅಪಹರಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆನಂತರ ಗುಂಡೇಟುಗಳಿದ್ದ ಗುಲ್ಜರ್ ಅವರ ಮೃತದೇಹ ಸಮೀಪದ ಮೈದಾನದಲ್ಲಿ ಪತ್ತೆಯಾಯಿತು. ಉಗ್ರರು ಅವರನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹತ್ಯೆಯಲ್ಲಿ ಹಿಜ್‍ಬುಲ್ ಮುಜಾಹಿದ್ಧಿನ್(ಎಚ್‍ಎಂ) ಭಯೋತ್ಪಾದನೆ ಸಂಘಟನೆಯ ಸ್ಥಳೀಯ ಉಗ್ರರಾದ ಜಹೂರ್ ಥೋಕರ್ ಮತ್ತು ಶೌಕತ್ ದರ್ ಅವರು ಶಾಮೀಲಾಗಿರುವ ಶಂಕೆ ಇದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಉಗ್ರರು ಇತ್ತೀಚೆಗೆ ಔರಂಗಜೇಬ್ ಮತ್ತು ಸಲೀಂ ಅಹಮದ್ ಎಂಬ ಯೋಧರನ್ನು ಅಪಹರಿಸಿ ಭೀಕರವಾಗಿ ಹತ್ಯೆ ಮಾಡಿದ ಘಟನೆಗಳ ಬೆನ್ನಲ್ಲೇ ಮತ್ತೊಂದು ಹಿಂಸಾಕೃತ್ಯ ನಡೆದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಹಂತಕ ಉಗ್ರರಿಗಾಗಿ ಪೊಲೀಸರು ಮತ್ತು ಯೋಧರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Facebook Comments

Sri Raghav

Admin