ದೇವೇಗೌಡರ ಕುಟುಂಬಕ್ಕಾಗಿ ಎಂತಹ ತ್ಯಾಗಕ್ಕಾದರೂ ಸಿದ್ಧ : ಮಾಜಿ ಶಾಸಕ ಶಿವರಾಮೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

Shivaramegowda--01
ಮಂಡ್ಯ, ಆ.14- ಪ್ರಜ್ವಲ್ ರೇವಣ್ಣ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದರೆ ಪಕ್ಷದಲ್ಲಿ ಯಾರಿಗೂ ಅಸಮಾಧಾನವಿಲ್ಲ. ದೇವೇಗೌಡರ ಕುಟುಂಬಕ್ಕಾಗಿ ತಾವು ಎಂತಹ ತ್ಯಾಗಕ್ಕಾದರೂ ಸಿದ್ಧ ಎಂದು ಮಾಜಿ ಶಾಸಕ ಶಿವರಾಮೇಗೌಡ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದಲ್ಲಿ ಅಂತಹ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾಗಮಂಗಲ ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯ್ತಿಗಳ ಮೀಸಲಾತಿ ವ್ಯತ್ಯಾಸ ವಿಷಯ ನಮ್ಮ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಮೀಸಲಾತಿ ವ್ಯತ್ಯಾಸ ಅಥವಾ ಕಾರ್ಯಕರ್ತರಲ್ಲಿ ಅಸಮಾಧಾನ ಕಂಡುಬಂದರೆ ಅದನ್ನು ಶಮನ ಮಾಡುವ ಶಕ್ತಿ ಪಕ್ಷಕ್ಕಿದೆ ಎಂದು ತಿಳಿಸಿದರು. ಈ ಬಾರಿಯ ಚುನಾವಣೆಯಲ್ಲಿ ಪಟ್ಟಣ ಪಂಚಾಯ್ತಿ ಮತ್ತು ಪುರಸಭೆಗಳಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Facebook Comments

Sri Raghav

Admin