ಹೃದಯಾಘಾತದಿಂದ ಎಎಸ್ಐ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Heart-Attack
ಚಿಕ್ಕಮಗಳೂರು, ಆ.14- ಸಹಾಯಕ ಸಬ್ ಇನ್ಸ್‍ಪೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಕರ್ತವ್ಯ ಮುಗಿಸಿಕೊಂಡು ಸಖರಾಯಪಟ್ಟಣದಲ್ಲಿರುವ ಕ್ವಾಟ್ರರ್ಸ್‍ಗೆ ತೆರಳಿದಾಗ ಶ್ರೀಕಂಠ ನಾಯಕ (58) ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಆಗಿ ಇವರು ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗಿದೆ.

Facebook Comments

Sri Raghav

Admin