ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 923 ಭೂಕುಸಿತ, 18 ಮಂದಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

HHP

ಶಿಮ್ಲಾ (ಪಿಟಿಐ), ಆ.14- ಕೇರಳ ಸೇರಿದಂತೆ ಭಾರತದ 16 ರಾಜ್ಯಗಳಲ್ಲಿ ವರುಣನ ಆರ್ಭಟದಿಂದ ಸಾವು-ನೋವು ಸಂಭವಿಸಿ, ಅಪಾರ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ 18 ಮಂದಿ ಬಲಿಯಾಗಿದ್ದಾರೆ. ರಾಜ್ಯದ ಆರು ರಾಷ್ಟ್ರೀಯ ಹೆದ್ದಾರಿಗಳಲ್ಲಿ 923 ಭೂಕುಸಿತಗಳು ಸಂಭವಿಸಿದ್ದು, ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಅಡ್ಡಿಯಾಗಿದೆ.

ಭೂಕುಸಿತದಿಂದ ರಸ್ತೆಗಳಿಗೆ ಹಾನಿಯಾಗಿದ್ದು, ನೂರಾರು ಜನರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಮುಂದಿನ 24 ತಾಸುಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಹಲವಾರು ಮೇಘಸ್ಫೋಟಗಳು ಸಂಭವಿಸಿದ್ದು, ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ ಎಂದು ರಕ್ಷಣಾ ಕಾರ್ಯಾಚರಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಉನ್ನತಾಧಿಕಾರಿಗಳ ಸಭೆ ನಡೆಸಿ, ಪರಿಸ್ಥಿತಿ ನಿಭಾಯಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ರಾಜಧಾನಿ ಶಿಮ್ಲಾದಲ್ಲಿ 117 ವರ್ಷಗಳಲ್ಲಿ ಎರಡನೇ ಬಾರಿ ಅತ್ಯಧಿಕ ಪ್ರಮಾಣದಲ್ಲಿ 172.6 ಸೆಂ.ಮೀ. ಗಳಷ್ಟು ಮಳೆಯಾಗಿದೆ.

Facebook Comments

Sri Raghav

Admin