ಪುತ್ತೂರಿನ ಮಾರ್ಗವಾಗಿ ಕುಕ್ಕೇ ತಲುಪಿದ ಸಿಎಂ ಫ್ಯಾಮಿಲಿ

ಈ ಸುದ್ದಿಯನ್ನು ಶೇರ್ ಮಾಡಿ
File Photo
File Photo

ಧರ್ಮಸ್ಥಳ, ಆ.14-ಕುಕ್ಕೇಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಗಳು ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರ್ಯಾಯ ಮಾರ್ಗವನ್ನು ಬಳಸಿದರು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ಅದೇ ರೀತಿ ಕುಕ್ಕೇಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದರಿಂದ ಗುಂಡ್ಯಾ ಮೂಲಕ ಕುಕ್ಕೇಸುಬ್ರಹ್ಮಣ್ಯ ಸಂಪರ್ಕ ಕಡಿತವಾಗಿದ್ದು, ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯ ಸಂಪರ್ಕ ಕಲ್ಪಿಸುವ ಹೊಸಮಠ ಸೇತುವೆಯೂ ಕೂಡ ಬಂದ್ ಆಗಿತ್ತು. ಹೀಗಾಗಿ ಮುಖ್ಯಮಂತ್ರಿಯವರು ಪುತ್ತೂರಿನ ಮಾರ್ಗವಾಗಿ ಬೆಳ್ಳಾರೆ ಮೂಲಕ ಕುಕ್ಕೇಸುಬ್ರಹ್ಮಣ್ಯಕ್ಕೆ ತೆರಳಿದರು.

ನಿನ್ನೆ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿ ರಾತ್ರಿ ಅಲ್ಲೇ ವಾಸ್ತವ್ಯ ಹೂಡಿದ್ದರು. ಇಂದು ಕುಕ್ಕೇಸುಬ್ರಹ್ಮಣ್ಯದಲ್ಲಿ ಕೆಟ್ಟದೃಷ್ಟಿ ಮತ್ತು ದೋಷ ನಿವಾರಣೆಗಾಗಿ ನಾಗಪೂಜೆ ಸಲ್ಲಿಸಲು ಆಗಮಿಸಿದ್ದರು. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೂ ಭಾರೀ ಮಳೆ ಹಾಗೂ ಪ್ರವಾಹದ ದರ್ಶನವಾಯಿತು.

Facebook Comments

Sri Raghav

Admin