ಹೇಮಾವತಿಯಲ್ಲಿ ಕೈ-ಕಾಲು ತೊಳೆಯಲು ಹೋಗಿ ಕೊಚ್ಚಿ ಹೋದ ರೈತ ಮಹಿಳೆ

ಈ ಸುದ್ದಿಯನ್ನು ಶೇರ್ ಮಾಡಿ

Hemavati-canal
ಕೆಆರ್ ಪೇಟೆ, ಆ.15- ಹೇಮಾವತಿ ಕಾಲುವೆಯಲ್ಲಿ ಕೈ-ಕಾಲು ತೊಳೆಯಲು ಹೋದ ರೈತ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಶೀಳನೆರೆ ಗ್ರಾಮದಲ್ಲಿ ನಡೆದಿದೆ. ಶೀಳನೆರೆ ಗ್ರಾಮದ ಶಂಕರೇಗೌಡ ಎಂಬುವವರ ಪತ್ನಿ ಸುಧಾಮಣಿ (50) ಮೃತಪಟ್ಟ ರೈತ ಮಹಿಳೆ.

ಸುಧಾಮಣಿ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ವಾಪಸ್ ಬರುವಾಗ ದಾರಿ ಮಧ್ಯೆ ಸಿಗುವ ಹೇಮಾವತಿ ಕಾಲುವೆಯ ಸೋಪಾನಕಟ್ಟೆಯಲ್ಲಿ ಕೈ-ಕಾಲು ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುವೆಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಮಹಿಳೆಯ ಶವಕ್ಕಾಗಿ ಗ್ರಾಮಸ್ಥರು ಗ್ರಾಮದ ನುರಿತ ಈಜು ಪಟುಗಳ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಆದರೂ ಶವ ಪತ್ತೆಯಾಗಿಲ್ಲ. ಘಟನೆ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೂ ಸಹ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.  ಮೃತರಿಗೆ ಪತಿ ಶಂಕರೇಗೌಡ, ಪುತ್ರ ಮನುಕುಮಾರ್, ಪುತ್ರಿ ಪುಷ್ಪಲತಾ ಇದ್ದಾರೆ.

Facebook Comments