ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಭೂತಪೂರ್ವ ಬಿಗಿ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

Red-Fort--01

ನವದೆಹಲಿ (ಪಿಟಿಐ), ಆ.15-ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಭಯೋತ್ಪಾದಕರ ದಾಳಿ ಸಾಧ್ಯತೆ ಬಗ್ಗೆ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಹಿಂದೆಂದೂ ಕಂಡು ಕೇಳರಿಯದ ಬಿಗಿ ಭದ್ರತೆ ಮಾಡಲಾಗಿದೆ. 72ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಐತಿಹಾಸಿಕ ಕೆಂಪುಕೋಟೆ ಸುತ್ತಮುತ್ತ ಅಭೂತಪೂರ್ವ ಬಂದೋಬಸ್ತ್ ಕಲ್ಪಿಸಲಾಗಿತ್ತು.  ಎನ್‍ಎಸ್‍ಜಿ ಸ್ನಿಪರ್‍ಗಳು, ಸ್ವಾಟ್ ಕಮ್ಯಾಂಡೋಗಳು, ವೈಮಾನಿಕ ಕಣ್ಗಾವಲು ಸೇರಿದಂತೆ ಅತ್ಯಂತ ಬಿಗಿ ಬಂದೋಬಸ್ತ್‍ಗೆ ದೆಹಲಿ ಸಾಕ್ಷಿಯಾಗಿತ್ತು.

ವಿಧ್ವಂಸಕ ಕೃತ್ಯಗಳನ್ನು ನಡೆಸಲು ದೆಹಲಿಗೆ ಪಾಕಿಸ್ತಾನದ ಜೈಷ್-ಎ-ಮಹಮದ್(ಜೆಇಎಂ) ಭಯೋತ್ಪಾದನೆ ಸಂಘಟನೆಯ ಮೂವರು ಉಗ್ರರು ನುಸುಳಿದ್ದಾರೆ ಎಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

Sri Raghav

Admin