ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

Fire--01
ಬೆಂಗಳೂರು,ಆ.15- ತಿರುಪತಿಯಿಂದ ನಗರಕ್ಕೆ ಆಗಮಿಸುತ್ತಿದ್ದ ಕೆಎಸ್‍ಆರ್‍ಟಿಸಿ ಅಂಬಾರಿ ಬಸ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಭಾಗಶಃ ಸುಟ್ಟು ಹೋಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಟಿನ್ ಫ್ಯಾಕ್ಟರಿ ಬಳಿಯ ಕೆಆರ್‍ಪುರಂ ಬ್ರಿಡ್ಜ್ ಬಳಿ ಬಸ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ಪ್ರಯಾಣಿಕರು ಬಸ್‍ನಿಂದಿಳಿದಿದ್ದಾರೆ.   ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದರಾದರೂ ಬಸ್ ಭಾಗಶಃ ಸುಟ್ಟು ಹೋಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin