ರಾಮನಗರದಲ್ಲಿ ದರ್ಶನ್ ಅಭಿಮಾನಿಗಳಿಗೆ ಲಾಠಿ ರುಚಿ..!

ಈ ಸುದ್ದಿಯನ್ನು ಶೇರ್ ಮಾಡಿ

Darshan-fans
ರಾಮನಗರ, ಆ.15-ಖಾಸಗಿ ಕಾರ್ಯ ಕ್ರಮಕ್ಕೆ ಆಗಮಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಅಪಾರ ಪ್ರಮಾಣದಲ್ಲಿ ನೆರೆದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.  ನಗರದ ಐಜೂರು ವೃತ್ತದಲ್ಲಿ ನೂತನ ಆಭರಣ ಮಳಿಗೆ ಉದ್ಘಾಟನಾ ಸಮಾರಂಭಕ್ಕೆ ದರ್ಶನ್ ಆಗಮಿಸಿದ್ದು, ನೆಚ್ಚಿನ ನಾಯಕನನ್ನು ಕಣ್ತುಂಬಿಕೊಳ್ಳಲು ನೆರೆದಿದ್ದ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿದ್ದರಿಂದ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಇಂದು ಬೆಳಗ್ಗಿನಿಂದಲೇ ವೃತ್ತದ ಸಮೀಪ ಜಮಾಯಿಸಿದ್ದ ದರ್ಶನ್ ಅಭಿಮಾನಿಗಳನ್ನು ಪೊಲೀಸರು ನಿಯಂತ್ರಿಸಿ ದರೂ ಕಾರ್ಯಕ್ರಮದ ಸಮಯದಲ್ಲಿ ಹೆಚ್ಚಿನ ಗೊಂದಲ ಉಂಟಾಯಿತು.

Facebook Comments

Sri Raghav

Admin