ಭಾರೀ ಮಳೆಯಿಂದ ಶಿರಾಡಿಘಾಟ್-ಸಂಪಾಜೆಯಲ್ಲಿ ವಾಹನ ಸಂಚಾರ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Shiradi-ghat--01
ಮಂಗಳೂರು,ಆ.15- ಭಾರೀ ಮಳೆಯಿಂದ ಗುಡ್ಡ ಕುಸಿತದಂತಹ ಘಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಶಿರಾಡಿಘಾಟ್ ಮತ್ತು ಸಂಪಾಜೆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಮಂಗಳೂರು ತಲುಪಲು ವಾಹನ ಸವಾರರು ಚಾರ್ಮಾಡಿ ಘಾಟ್ ರಸ್ತೆಯನ್ನು ಬಳಸಬಹುದು ಎಂದು ಅವರು ತಿಳಿಸಿದ್ದಾರೆ.

ಘಾಟ್ ರಸ್ತೆಗಳಲ್ಲಿ ಗುಡ್ಡ ಕುಸಿತ ಘಟನೆಗಳು ಕಳೆದೆರಡು ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಎರಡು ಘಾಟ್ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Facebook Comments

Sri Raghav

Admin