ರಾಷ್ಟ್ರದ ಸಂವಿಧಾನವೇ ಶ್ರೇಷ್ಠ ಗ್ರಂಥ : ಸಚಿವ ಕೃಷ್ಣಭೈರೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

Kolar-Krishne-baireGowda
ಕೋಲಾರ,ಆ.15-ರಾಷ್ಟ್ರದ ಸಂವಿಧಾನವೇ ಶ್ರೇಷ್ಠ ಗ್ರಂಥ. ನಮ್ಮನ್ನು ನಾವು ಸಂವಿಧಾನಕ್ಕೆ ಸಮರ್ಪಣೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 72ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನದ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ನೈಸರ್ಗಿಕ ಸಂಪತ್ತು ಇಲ್ಲದಿದ್ದರೂ ಜನತೆಯ ಶ್ರಮ, ಸಮರ್ಪಣಾ ಮನೋಭಾವದಿಂದ ಜೀವನ ಸಾಗಿಸುತ್ತಿದಾರೆ ಎಂದು ಹೇಳಿದರು.
ಬದಲಾಗಿರುವ ಪರಿಸ್ಥಿತಿಗೆ ಅನುಗುಣವಾಗಿ ಪೋಷಕರು ಮಕ್ಕಳಿನ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ಕೊಟ್ಟು , ಜಿಲ್ಲೆಯ ಜನ ವಿಶ್ವದ ನಾಗಾ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಜಿಲ್ಲಾ ಹೈನುಗಾರಿಕೆ, ತೋಟಗಾರಿಕ್ಕೆ ಗೆ ಹೆಸರಾಗಿದ್ದು, ಕೈಗಾರಿಕಾ ಕ್ಷೇತ್ರದಲ್ಲೂ ಅಭಿವೃದ್ದಿಗೆಗೊಂಡಿದೆ. ನರಸಾಪುರ ಮತ್ತು ವೇಮಗಲ್‍ಗಳಲ್ಲಿ ಕೈಗಾರಿಕಾ ಪ್ರದೇಶವಾಗಿ ಮಾರ್ಪಟ್ಟಿದ್ದು , ಈಗ ವಿಶ್ವದ ಪ್ರತಿಷ್ಠಿತ ಮೊಬೈಲ್ ಕಂಪನಿಯಾದ ಆ್ಯಪ್ ಸಂಸ್ಥೆಯು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಉತ್ಪಾದನೆಗೆ ಸಿದ್ದಗೊಳುತ್ತಿದೆ. ಇದರಿಂದಾಗಿ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಸರು ಬಂದಂತಾಗಿದೆ ಎಂದು ಅವರು ಹೇಳಿದರು.  ಜಿಲ್ಲೆಯಲ್ಲಿ ಕೃಷಿ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಇಸ್ರೇಲ್ ಮಾದರಿಯ ಕೃಷಿ ಅಭಿವೃದ್ದಿಗಾಗಿ ರಾಜ್ಯ ಸರ್ಕಾರವು ಇಸ್ರೇಲ್ ಮಾದರಿಯ ವ್ಯವಸಾಯ ಹಾಗೂ ನೀರಾವರಿ ಪದ್ಧತಿ ಅಳವಡಸಲು 5 ಸಾವಿರ ಹೆಕ್ಟೇರ್ ಕುಷ್ಕಿ ಜಮೀನನ್ನು ಮೀಸಲಿಟ್ಟು ಅದಕ್ಕಾಗಿ 150 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಅವರು ವಿವರಿಸಿದರು.  ಆಹಾರ ಕ್ಷೇತ್ರದಲ್ಲಿ ಸರ್ಕಾರ ಮುಂದೆ ಬಂದಿದ್ದು, ಜಿಲ್ಲೆಯಲ್ಲಿ ಒಟ್ಟು 6 ಇಂದಿರಾ ಕ್ಯಾಂಟೀನ್‍ಗಳನ್ನು ಸ್ಥಾಪಿಸಲು ಮುಂದಾಗಿದೆ.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಸಫಟ್ ಕಟೋಚ್, ಜಿಲ್ಲಾ ಪಂಚಾಯ್ತಿ ಸಿಇಒ ಲತಾಕುಮಾರಿ, ಸಂಸದ ಕೆ.ಎಚ್.ಮುನಿಯಪ್ಪ, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ವಿಧಾನಸಭಾ ಸದಸ್ಯರಾದ ಶ್ರೀನಿವಾಸಗೌಡ, ಜಿಪಂ ಅಧ್ಯಕ್ಷರಾದ ಗೀತಾ, ಉಪಾಧ್ಯಕ್ಷರಾದ ಯಶೋಧಮ್ಮ, ನಗರಸಭಾ ಅಧ್ಯಕ್ಷೆ ಮಹಾಲಕ್ಷ್ಮಿ ಮತ್ತಿತರ ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin