ಪ್ರತಿಷ್ಠಿತ ಶಾಲೆಯ ಆವರಣದಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

un-dead

ನೆಲಮಂಗಲ,ಆ.16- ಪ್ರತಿಷ್ಠಿತ ಖಾಸಗಿ ಶಾಲಾ ಆವರಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮಿಪುರ ಗ್ರಾಮದ ಕಾಲೋನಿ ನಿವಾಸಿ ಬಸವರಾಜು-ಮಂಜುಳಾ ದಂಪತಿಯ ಮಗ ನಿರಂಜನ್(14) ಮೃತ ವಿದ್ಯಾರ್ಥಿ.

ಈತ ಗಂಗಗೊಂಡನಹಳ್ಳಿ ಗ್ರಾಮದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ. ಬೆಳಗ್ಗೆ ಮನೆಯಲ್ಲಿ ಹೋಂ ವರ್ಕ್ ಮಾಡಲು ಡಿಸ್ಟರ್ಬ್ ಆಗುತ್ತಿದೆ. ಶಾಲೆಯಲ್ಲೇ ಹೋಗಿ ಮಾಡುತ್ತೇನೆ ಎಂದು ನಿರಂಜನ್ ಹೇಳಿ ಹೋಗಿದ್ದ. ಆದರೆ ಶಾಲಾ ಆವರಣದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು , ಪೋಷಕರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಯ ಸಾವಿನ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಿಸಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಶಾಲೆಯ ಸಿಸಿ ಕ್ಯಾಮೆರಾದ ಡಿವಿಆರ್ ವಶಕ್ಕೆ ಪಡೆದುಕೊಂಡಿದ್ದಾರೆ. ಶಾಲೆಯ ಸೆಕ್ಯೂರಿಟಿ ಗಾರ್ಡ್, ಶಾಲಾ ವಾಹನದ ಚಾಲಕರಿಂದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಶಾಲಾ ಆಡಳಿತ ಮಂಡಳಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಿರಂಜನ್ ಮೃತ ದೇಹವನ್ನು ನೋಡಲು ಆಡಳಿತಮಂಡಳಿಯವರು ಯಾರೂ ಬಂದಿಲ್ಲ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin