ಮಧುಗಿರಿಯ ಏಕಶಿಲಾ ಬೆಟ್ಟದಿಂದ ಬಿದ್ದಿದ್ದ ವ್ಯಕ್ತಿಯ ಮೃತದೇಹ ಪತ್ತೆಹಚ್ಚಿದ ‘ಸ್ಪೈಡರ್ ಮ್ಯಾನ್’

ಈ ಸುದ್ದಿಯನ್ನು ಶೇರ್ ಮಾಡಿ

Madhugiri--01

ತುಮಕೂರು, ಆ.16- ಇಲ್ಲಿನ ಮಧುಗಿರಿಯ ಏಕಶಿಲಾ ಬೆಟ್ಟದಿಂದ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ವ್ಯಕ್ತಿಯೊಬ್ಬರ ಮೃತದೇಹ ಎರಡು ದಿನಗಳ ನಂತರ ಇಂದು ಪತ್ತೆಯಾಗಿದ್ದು, ಶವವನ್ನು ಅಲ್ಲಿಂದ ಸಾಹಸಮಯ ರೀತಿಯಲ್ಲಿ ಕೆಳಗೆ ತರಲಾಗಿದೆ.  ಸ್ಪೈಡರ್ ಮ್ಯಾನ್ ಎಂಬ ಖ್ಯಾತಿಯ ಜ್ಯೋತಿರಾಜ್ ಅವರು ಹಗ್ಗದ ಮೂಲಕ ಬೆಟ್ಟದ ತುದಿಗೆ ತಲುಪಿ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಶವವನ್ನು ಚೀಲದಲ್ಲಿ ಹಾಕಿ ಬೆಟ್ಟದಿಂದ ಕೆಳಗೆ ಇಳಿಸಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ನಶೆಯಲ್ಲಿ ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಎರಡು ದಿನಗಳ ಹಿಂದೆ ಬೆಟ್ಟದಿಂದ ಕೆಳಗೆ ಬಿದ್ದಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ನಿನ್ನೆ ಕಾರ್ಯಾಚರಣೆ ನಡೆಸಿ ಶವ ಪತ್ತೆ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಅವರಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಅಗ್ನಿಶಾಮಕ ಸಿಬ್ಬಂದಿ ಜ್ಯೋತಿರಾಜ್ ಅವರ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಮಧುಗಿರಿಗೆ ಬಂದು ತಂಗಿದ್ದ ಜ್ಯೋತಿರಾಜ್ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆಳಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin