ಕೊಳವೊಂದರಲ್ಲಿ ಮುಳುಗಿ ನಾಲ್ಕು ಮಕ್ಕಳು ನೀರುಪಾಲು

ಈ ಸುದ್ದಿಯನ್ನು ಶೇರ್ ಮಾಡಿ

UP--01

ಪಿಲಿಬಿಟ್, ಆ.16-ಮಳೆ ನೀರಿನಿಂದ ತುಂಬಿದ್ದ ಕೊಳವೊಂದರಲ್ಲಿ ನಾಲ್ಕು ಮಕ್ಕಳು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಪಿಲಿಭಿಟ್ ಜಿಲ್ಲೆಯ ಬಾರ್ಹಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದೆ. ಮನೋಜ್(12), ಅಜಯ್(12), ಜೀತು(10), ಹಾಗೂ ಪ್ರದೀಪ್(8) ಮೃತಪಟ್ಟ ನತದೃಷ್ಟ ಬಾಲಕರು. ಈ ಮಕ್ಕಳ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಮಕ್ಕಳನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಾದ ಎಲ್ಲ ನೆರವು ನೀಡುವುದಾಗಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಜ್ ಕಿಶೋರ್ ತಿಳಿಸಿದ್ದಾರೆ.

Facebook Comments

Sri Raghav

Admin