ಯತ್ನಾಳ್ ಅವರಿಂದ ತೆರವಾದ ಪರಿಷತ್ ಸ್ಥಾನಕ್ಕೆ ಎಂ.ಬಿ.ಪಾಟೀಲ್ ಸಹೋದರ ಅನಿಲ್ ಪಾಟೀಲ್ ಕಣಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Anil-Patil--01

ಬೆಂಗಳೂರು, ಆ.16- ಬಸವನಗೌಡ ಪಾಟೀಲ್ ಯತ್ನಾಳ್ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಸಹೋದರ ಅನಿಲ್ ಪಾಟೀಲ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಸಚಿವ ಸ್ಥಾನ ವಂಚಿತರಾಗಿ ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿರುವ ಎಂ.ಬಿ.ಪಾಟೀಲ್ ಅವರನ್ನು ಸಮಾಧಾನಪಡಿಸಲು ಅನಿಲ್ ಪಾಟೀಲ್ ಅವರಿಗೆ ಮೇಲ್ಮನೆಗೆ ಟಿಕೆಟ್ ಕೊಡಲು ಕಾಂಗ್ರೆಸ್ ಮುಂದಾಗಿದೆ.

ವಿಜಯಪುರ, ಬಾಗಲಕೋಟೆ ಕಾಂಗ್ರೆಸ್ ಮುಖಂಡರು ಇಂದು ಕೆಪಿಸಿಸಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದವರೊಂದಿಗೆ ಸಭೆ ನಡೆಸಿದರು.  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ಜೆಡಿಎಸ್ ಮೈತ್ರಿ ಬಗ್ಗೆಯೂ ಕೂಡ ಚರ್ಚೆ ನಡೆಸಲಾಯಿತು. ಬಿಜಾಪುರ, ಬಾಗಲಕೋಟೆಯಲ್ಲಿ ಜೆಡಿಎಸ್ ಪ್ರಬಲವಾಗಿಲ್ಲದ ಕಾರಣ ಮೈತ್ರಿ ಅಗತ್ಯತೆ ಇಲ್ಲ ಎಂದು ಅಲ್ಲಿನ ನಾಯಕರು ಮುಖಂಡರ ಗಮನಕ್ಕೆ ತಂದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಯಿತು.

Facebook Comments

Sri Raghav

Admin