2001ರ ಸಂಸತ್ ಭವನದ ಮೇಲಿನ ದಾಳಿ ಮತ್ತು ವಾಜಪೇಯಿ

ಈ ಸುದ್ದಿಯನ್ನು ಶೇರ್ ಮಾಡಿ

Parlimaent--01

2001ರ ಡಿಸೆಂಬರ್ 13 ರಂದು ಶಸ್ತ್ರಧಾರಿ ಉಗ್ರರಿಂದ ಭಾರತದ ಆಡಳಿತ ಕೇಂದ್ರ ಸಂಸತ್ ಭವನದ ಮೇಲೆ ದಾಳಿ ನಡೆಯಿತು. ಕಾರುಗಳ ಮೇಲೆ ಕೇಂದ್ರ ಗೃಹ ಇಲಾಖೆ ಹಾಗು ಸಂಸತ್ ಸದಸ್ಯರು ಎಂಬ ಪಟ್ಟಿಗಳನ್ನು ಬಳಸಿಕೊಂಡು ಸಂಸತ್ ಭವನದ ಆವರಣ ಪ್ರವೇಶಿಸಿಸಿ ಹಠಾತ್ ಗುಂಡಿನ ದಾಳಿ ನಡೆಸಲು ಶುರು ಮಾಡಿದ ಉಗ್ರರು ಸಂಸತ್ ಭವನದ ಹಲವಾರು ಭದ್ರತಾ ಸಿಬ್ಬಂದಿಗಳನ್ನು ಹತ್ಯೆ ಮಾಡಿದರು.

ದಾಳಿಗೂ ಮುನ್ನ ಕೇವಲ 40 ನಿಮಿಷಗಳ ಮುಂಚೆ ರಾಜ್ಯ ಸಭಾ ಹಾಗು ಲೋಕ ಸಭಾ ಅಧಿವೇಶನಗಳು ಮುಗಿದಿದ್ದವು. ಆದ್ದರಿಂದ ಬಹುತೇಕ ಸಂಸದರು, ಮಂತ್ರಿಗಳು ಹಾಗು ಅಧಿಕಾರಿ ವರ್ಗದವರು ಸಂಸತ್ ಭವನದಲ್ಲಿ ಇರಲಿಲ್ಲ. ಆದರೂ ಆಗಿನ ಗೃಹ ಮಂತ್ರಿಗಳಾಗಿದ್ದ ಎಲ್.ಕೆ ಅಡ್ವಾಣಿ ಹಾಗು ಕೇಂದ್ರದ ರಾಜ್ಯ ರಕ್ಷಣಾ ಸಚಿವ ಹರಿನ್ ಪಾಠಕ್ ಸಂಸತ್ ಭವನದ ಒಳಗೆ ಇದ್ದರು ಎಂಬ ವರದಿಗಳಿವೆ.

100 ಜನಕ್ಕೂ ಮಿಗಿಲಾಗಿ ರಾಜಕಾರಣಿಗಳು ಆ ಸಮಯದಲ್ಲಿ ಸಂಸತ್ ಒಳಗಿದ್ದರು. ಏಕಾಏಕಿ ದಾಳಿ ಮಾಡಿದ ಉಗ್ರರು ಎ ಕೆ 47, ಗ್ರೆನೇಡು, ಸ್ಫೋಟಕ ಹಾಗು ಪಿಸ್ತೂಲುಗಳನ್ನು ಹೊಂದಿದ್ದರು ಎಂಬ ವರದಿ ದೆಹಲಿ ಪೊಲಿಸ್ ರಿಂದ ಬಹಿರಂಗವಾಗಿದೆ. ತಕ್ಷಣ ಭಾರತೀಯ ರಕ್ಷಣಾ ಪಡೆಗಳು ಸಂಸತ್ ಭವನದ ಪ್ರಮುಖ ದ್ವಾರಗಳನ್ನು ಬಂದ್ ಮಾಡಿಸಿ ಸತತ ಪ್ರಯತ್ನ ಪಟ್ಟು ಉಗ್ರರನ್ನು ಸದೆಬಡಿದರು. ಮುಂದೆ ಹತರಾದ ಅಷ್ಟೂ ಉಗ್ರರರು ಪಾಕಿಸ್ತಾನಿ ಪ್ರಜೆಗಳು ಎಂಬುದು ಸಾಬೀತಾಯಿತು.

ಭಯೋತ್ಪಾದನೆಯನ್ನು ಹತ್ತಿಕ್ಕುವ ಸಲುವಾಗಿ ವಾಜಪೇಯಿ ಆಡಳಿತ ಭಯೋತ್ಪಾದನಾ ನಿಷೇಧ ಕಾಯ್ದೆ ಯನ್ನು ಸಿದ್ಧಪಡಿಸಿ ಜಾರಿ ಮಾಡಿತು. ಯಾರನ್ನು ಬೇಕಾದರೂ ಭಯೋತ್ಪಾದಕರು ಎಂದು ಹಿಡಿದು ಶಿಕ್ಷಿಸುವ ಅವಕಾಶಗಳು ಆ ಕಾಯ್ದೆ ಯಲ್ಲಿ ಇರುವುದರಿಂದ ಈ ಕಾಯ್ದೆ ಜಾರಿಯಾಗ ಕೂಡದು ಎಂದು ಮಾನವ ಹಕ್ಕುಗಳ ಹೋರಾಟದ ಗುಂಪುಗಳು ವಿರೋಧ ತೋರಿದವು. ವಿಪಕ್ಷಗಳು ಕೂಡ ಈ ವಿಚಾರದಲ್ಲಿ ನಕಾರಾತ್ಮಕವಾಗಿ ಸ್ಪಂದಿಸಿದ್ದವು.

Facebook Comments

Sri Raghav

Admin