ಕೊಡಗಿನಲ್ಲಿ ಭಾರೀ ಮಳೆ : ಜನರ ರಕ್ಷಣೆಗೆ ಧಾವಿಸಿದ ಸೇನೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--001
ಬೆಂಗಳೂರು, ಆ.17-ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕರಾವಳಿ, ಮಲೆನಾಡು ಭಾಗದಲ್ಲಿ ಕೈಗೊಂಡಿರುವ ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಬಗ್ಗೆ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ಪಡೆದರು.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ಸಂಕಷ್ಟದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಮುಖ್ಯಮಂತ್ರಿ ಪಡೆದರು.

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸಲು ಸೇನೆಯ ನೆರವನ್ನು ಬಳಸಿಕೊಳ್ಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕದಳ, ಕ್ವಿಕ್‍ರೆಸ್ಪಾನ್ಸ್ ಟೀಂ ಮೊದಲಾದ ತಂಡಗಳು ಜನರ ರಕ್ಷಣೆ ಮಾಡುತ್ತಿರುವುದಾಗಿ ಮುಖ್ಯ ಕಾರ್ಯದರ್ಶಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ನಿಕಟ ಸಂಪರ್ಕದಲ್ಲಿರುವ ಮುಖ್ಯಮಂತ್ರಿಗಳು ಆಗಾಗ್ಗೆ ಮಾಹಿತಿ ಪಡೆದು ಪರಿಹಾರ ಕಾರ್ಯಗಳ ಬಗ್ಗೆ ನಿರ್ದೇಶನ ನೀಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಹ ಆಯಾ ಜಿಲ್ಲೆಯ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯ ಕಾರ್ಯಾಚರಣೆಯನ್ನು ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook Comments