ಕೊಡಗು ಭಾಗದ ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Kodagau-Rain--01
ಬೆಂಗಳೂರು,ಆ.18- ಕೊಡಗು ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ್ದು, ಭಾರಿ ಮಳೆ ಹಿನ್ನೆಲೆ ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಚುನಾವಣೆಗೆ ತಡೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ಚುನಾವಣಾ ದಿನಾಂಕ ಪ್ರಕಟಿಸಲಾಗುವುದು. ಈ ಭಾಗದಲ್ಲಿ ಇಂದು ನಾಮಪತ್ರ ಸಲ್ಲಿಕೆ ನಿಲ್ಲಲಿದೆ. ಇದುವರೆಗೂ ನಾಮಪತ್ರ ಸಲ್ಲಿಸಿದವರ ಪರಿಶೀಲನೆ ನಂತರ ನಡೆಯಲಿದೆ. ಮಳೆ ಕಡಿಮೆ ಆದ ನಂತರ ಪರಿಶೀಲಿಸಿ ಮುಂದಿನ ದಿನಾಂಕ ಪ್ರಕಟಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin