ಕೊಡಗು ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ. 18- ಮುಂಗಾರಿನ ಅಬ್ಬರಕ್ಕೆ ನಲುಗಿದ ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದರು. ನೆರೆ ಪೀಡಿತ ಪ್ರದೇಶಗ ಪರಿಶೀಲನೆಗಾಗಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಇಂದು ಮದ್ಯಾಹ್ನ ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ನೆರೆ ಪೀಡಿತ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಮೂಕಲ ವೈಮಾನಿಕ ಸಮೀಕ್ಷೆ ನಡೆಸಿದರು . ಮಳೆ ಅನಾವುತಕ್ಕೀಡಾಗಿರುವ ಪ್ರದೇಶಗಳಲ್ಲಿ ಜನರ ರಕ್ಷಣೆ , ತುರ್ತು ಪರಿಹಾರ ಕಾರ್ಯಗಳಿಗೆ ಸಮರೋಪಾದಿಯಲ್ಲಿ ನಡೆಸುವಂತೆ ಸೂಚನೆ ನೀಡುವರುವ ಅವರು ವಾಸ್ತವ ಸ್ಥಿತಿಗತಿಯನ್ನು ಅರಿಯಲು ಇಂದು ಖುದ್ದು ವೈಮಾನಿಕ ಸಮೀಕ್ಷೆ ನಡೆಸಿದರು,. ನಾಳೆ ಮೈಸೂರು, ಚಿಕ್ಕಮಗಳೂರು ಸೇರಿದಂತೆ ಇತರೆ ನೆರೆ ಪೀಡಿತ ಪ್ರದೇಶಗಳಲ್ಲೂ ಕೂಡ ಪ್ರವಾಸ ಕೈಗೊಳ್ಳಲಿದ್ದಾರೆ.

CM-Kumaraswamy--01

Facebook Comments

Sri Raghav

Admin