ಪ್ರಗತಿಪರ ಚಿಂತಕ ದಾಬೋಲ್ಕರ್ ಹತ್ಯೆ ಪ್ರಕರಣ ಪ್ರಮುಖ ಆರೋಪಿ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Narendra-Dabholkar'

ಮುಂಬೈ,ಆ.18: ಪ್ರಗತಿಪರ ಚಿಂತಕ ನರೇಂದ್ರ ದಾಬೋಲ್ಕರ್ ಅವರನ್ನು ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಬಿಐ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಸಚಿನ್ ಪ್ರಕಾಶ್‌ರಾವ್ ಅಂದುರೆ ಎಂದು ಗುರುತಿಸಲಾಗಿದ್ದು ಔರಂಗಬಾದ್‌ನಲ್ಲಿ ಆತನನ್ನು ಬಂಧಿಸಲಾಗಿದೆ. ಅಂದುರೆ, ದಾಬೋಲ್ಕರ್ ಅವರ ಮೇಲೆ ಗುಂಡು ಹಾರಿಸಿದ ಶೂಟರ್‌ಗಳಲ್ಲಿ ಓರ್ವನಾಗಿದ್ದ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮೂಢನಂಬಿಕೆ ಮತ್ತು ಮಾಟಮಂತ್ರದ ವಿರುದ್ಧ ಹೋರಾಟ ನಡೆಸಿದ್ದ ವಿಚಾರವಾದಿ, ಲೇಖಕ, ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಅಧ್ಯಕ್ಷ ನರೇಂದ್ರ ಅಚ್ಯುತ್ ದಾಬೋಲ್ಕರ್ (67) ಅವರನ್ನು 2013ರ ಆಗಸ್ಟ್ 20ರಂದು ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

ಸರಿಯಾಗಿ 5 ವರ್ಷಗಳ ನಂತರ ಪ್ರಮುಖ ಆರೋಪಿಯ ಬಂಧಿನ, ಕರ್ನಾಟಕದ ಸಂಶೋಧಕ ಮತ್ತು ವಿಚಾರವಾದಿ ಡಾ. ಎಂಎಂ ಕಲಬುರ್ಗಿ, ಎಡಪಂಥೀಯ ರಾಜಕಾರಣಿ ಗೋವಿಂದ್ ಪನ್ಸಾರೆ, ಕನ್ನಡ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಮೇಲೆಯೂ ಬೆಳಕು ಚೆಲ್ಲುವ ಸಾಧ್ಯತೆಯಿದೆ.  ಐದು ವರ್ಷಗಳ ನಂತರವೂ ನರೇಂದ್ರ ದೋಭೋಲ್ಕರ್ ಹತ್ಯೆ ಮಾಡಿದವರನ್ನು ಬಂಧಿಸಲು ತನಿಖೆ ನಡೆಸಲು ವಿಫಲವಾಗಿದ್ದ ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳ ಮೇಲೆ ಮುಂಬೈ ಹೈಕೋರ್ಟ್ ಕೆಂಡ ಕಾರಿತ್ತು. ಇದಾದ ಕೆಲವೇ ದಿನಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Facebook Comments

Sri Raghav

Admin