ತಿರುಪತಿಗೆ ಸೋನಿಯಾ ಗಾಂಧಿ, ಪುತ್ರಿ ಪ್ರಿಯಾಂಕ, ಅಳಿಯ ರಾಬರ್ಟ್ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Soniya-------20

ತಿರುಪತಿ, ಆ.18-ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರಿ ಪ್ರಿಯಾಂಕಾ ವಾದ್ರಾ ಮತ್ತು ಅಳಿಯ ರಾಬರ್ಟ್ ವಾದ್ರಾ ಇಂದು ಬೆಳಗ್ಗೆ ವಿಶ್ವವಿಖ್ಯಾತ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಸೋನಿಯಾ, ಪ್ರಿಯಾಂಕ ಮತ್ತು ರಾಬರ್ಟ್ ಅವರಿಗೆ ತಿ ರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಟ್ರಸ್ಟ್‍ನ ಮುಖ್ಯಸ್ಥರು ಅತಿಗಣ್ಯರಿಗೆ ನೀಡುವ ಸಾಂಪ್ರದಾಯಿಕ ಸ್ವಾಗತ ಕೋರಿ ಬರಮಾಡಿಕೊಂಡರು.

2,000 ವರ್ಷಗಳ ಪುರಾತನ ತಿರುಮಲ ದೇವಸ್ಥಾನದ ಗರ್ಭಗುಡಿಯಲ್ಲಿ ಸೋನಿಯಾ ಅವರು ಮಗಳು ಮತ್ತು ಅಳಿಯನೊಂದಿಗೆ ವಿಶೇಷ ಆರತಿ ಕಾರ್ಯಕ್ರಮ ವೀಕ್ಷಿಸಿ, ಪ್ರಾರ್ಥನೆ ಪೂಜೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಕಾಂಗ್ರೆಸ್ ಮುಖಂಡರು ಸಹ ಹಾಜರಿದ್ದರು. ಸೋನಿಯಾ ಮತ್ತು ಅವರ ಪರಿವಾರದ ಭೇಟಿ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ಬಂದೋಬಸ್ತ್ ಮಾಡಲಾಗಿತ್ತು.

Rober--------21

Facebook Comments

Sri Raghav

Admin