ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಪುತ್ರನಿಗೆ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Vikramaditya

ನವದೆಹಲಿ, ಆ.20-ಹಿಮಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರಿಗೆ ಹಣ ದುರ್ಬಳಕೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವೊಂದು ಇಂದು ಜಾಮೀನು ಮಂಜೂರು ಮಾಡಿದೆ.  50,000 ರೂ.ಗೆ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಶೂರಿಟಿ ಮೇಲೆ ವಿಕ್ರಮಾದಿತ್ಯ ಸಿಂಗ್ ಅವರಿಗೆ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಜಾಮೀನು ಮಂಜೂರು ಮಾಡಿದರು.

ಪೂರ್ವಾನುಮತಿ ಇಲ್ಲದೇ ದೇಶ ಬಿಟ್ಟು ಹೋಗದಂತೆ, ಯಾವುದೇ ಸಾಕ್ಷ್ಯಾಧಾರಗಳನ್ನು ನಾಶಪಡಿಸದಂತೆ ಹಾಗೂ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಕೋರ್ಟ್ ವಿವಿಧ ಷರತ್ತುಗಳನ್ನು ವಿಧಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗಿದೆ.

Facebook Comments

Sri Raghav

Admin