ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್ ಪಾಟೀಲ್ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Anil-Patil--01
ಬೆಂಗಳೂರು, ಆ.20- ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‍ಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಸುನೀಲ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ನೀಡಲಾಗಿದೆ. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆಯಿಂದ ತೆರವಾದ ಪರಿಷತ್ ಸ್ಥಾನಕ್ಕೆ ಸುನೀಲ್ ಪಾಟೀಲ್‍ರನ್ನು ಆಯ್ಕೆ ಮಾಡಲಾಗಿದೆ. ಇದೇ 29 ರಿಂದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದು, ಸೆ.3ರಂದು ಫಲಿತಾಂಶ ಹೊರ ಬೀಳಲಿದೆ.

Facebook Comments

Sri Raghav

Admin