ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ACB
ದಾವಣಗೆರೆ, ಆ.21- ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ಪಟ್ಟಣದ ಇಬ್ಬರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಶಿಕಾರಿಪುರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಎಫ್‍ಡಿಎ ಚನ್ನಪ್ಪ ಹಾಗೂ ಮಲೇಬೆನ್ನೂರಿನ ಡಿಸಿಸಿ ಬ್ಯಾಂಕ್‍ನ ಅಸಿಸ್ಟೆಂಟ್ ಮ್ಯಾನೇಜರ್ ಭೀಮನಗೌಡ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾವಣಗೆರೆಯ ಆಜಾದ್ ನಗರದಲ್ಲಿರುವ ಚಿನ್ನಪ್ಪ ಅವರ ನಿವಾಸ ಎಸ್‍ಎಸ್ ಲೇ ಔಟ್‍ನಲ್ಲಿರುವ ಭೀಮನ ಗೌಡ ಅವರ ಮನೆ ಮೇಲೆ ಎಸಿಬಿ ಎಸ್ಪಿ ವಂಶಿಕೃಷ್ಣ ನೇತೃತ್ವದ ತಂಡ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Facebook Comments

Sri Raghav

Admin