ಕೌಟುಂಬಿಕ ಕಲಹದಿಂದ ನೊಂದು ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-Water-02

ಮಂಡ್ಯ, ಆ.21- ಕೌಟುಂಬಿಕ ಕಲಹದಿಂದ ನೊಂದ ಪತ್ನಿ ಬಾವಿಗೆ ಹಾರಿದ್ದರಿಂದ ಪತಿಯೂ ಸಹ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಮಾದೇಗೌಡ (50) ಮತ್ತು ರತ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.  ವ್ಯವಸಾಯ ಮಾಡಿಕೊಂಡಿದ್ದ ಮಾದೇಗೌಡ ರಾತ್ರಿ ಪತ್ನಿ ಜೊತೆ ಕೌಟುಂಬಿಕ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿದಾಗ ನೊಂದ ರತ್ನಮ್ಮ ಮನೆಯ ಮುಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದರಿಂದ ಗಾಬರಿಯಾದ ಮಾದೇಗೌಡ ಸಹ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ಬೆಳಕಾಗುವವರೆಗೂ ಯಾರಿಗೂ ಗೊತ್ತಾಗಿಲ್ಲ. ಇಂದು ಬೆಳಗಿನ ಜಾವ ಬಾವಿ ಬಳಿ ಬಂದ ಸ್ಥಳೀಯರೊಬ್ಬರು ಬಾವಿಯೊಳಗೆ ಶವಗಳು ತೇಲುತ್ತಿದ್ದುದನ್ನು ಕಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.  ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಬಾವಿಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin