ಸದ್ಯಕ್ಕೆ ಸಮನ್ವಯ ಸಮಿತಿ ಸಭೆ ಇಲ್ಲ : ಡಿಸಿಎಂ ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Parameshwar
ಬೆಂಗಳೂರು,ಆ.22- ಕೊಡಗು ಪ್ರವಾಹದ ಹಿನ್ನಲೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಸುವುದು ಸದ್ಯಕ್ಕೆ ಬೇಡ ಎಂದು ನಿರ್ಧರಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಮಳೆಯಿಂದ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ. ಇಂಥ ಪರಿಸ್ಥತಿಯಲ್ಲಿ ಸಭೆ ನಡೆಸುವುದು ಸೂಕ್ತವಲ್ಲ ಎಂದರು.

ಸದ್ಯಕ್ಕೆ ಕೊಡಗಿನಲ್ಲಿ ಮಳೆ ಬಿಡುವು ಕೊಟ್ಟಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ ಎಂಟು ಮಂದಿ ಸಾವನ್ನಪ್ಪಿದ್ದಾರೆ. 40 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

Facebook Comments

Sri Raghav

Admin