ಕೊಡಗಿನ ಹಾನಿ ವರದಿ ಬಂದ ನಂತರ ಸೂಕ್ತ ಪರಿಹಾರ : ದೇಶಪಾಂಡೆ
ಹುಬ್ಬಳ್ಳಿ, ಆ.22- ಕೊಡಗಿನಲ್ಲಿನ ಸಂತ್ರಸ್ತರಿಗೆ ಸಮರ್ಪಕವಾದ ಪುನರ್ವಸತಿ ಕಲ್ಪಿಸಲಾಗುವುದು. ಈಗಾಗಲೇ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ನಷ್ಟದ ಸಂಪೂರ್ಣ ವರದಿ ತರಿಸಿ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಕುಂಭದ್ರೋಣ ಮಳೆಯಿಂದ ಜನರು ತತ್ತರಿಸಿಹೋಗಿದ್ದಾರೆ. ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರಿಗೆ ಎಲ್ಲ ರೀತಿಯ ಸಹಕಾರ ನೀಡಲು ನಾವು ಬದ್ಧರಿದ್ದೇವೆ.
ಸಾಗರೋಪಾದಿಯಲ್ಲಿ ಪರಿಹಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಪಶ್ಚಿಮ ಘಟ್ಟದ ಸಂರಕ್ಷಣೆ ಮಾಡಬೇಕಿತ್ತು. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಇದು ಒಂದು ಪಕ್ಷದಿಂದ ಸಾಧ್ಯವಿಲ್ಲ, ಎಲ್ಲ ಪಕ್ಷಗಳೂ ಒಗ್ಗೂಡಬೇಕು ಎಂದರು. ಪಶ್ಚಿಮಘಟ್ಟ ರಕ್ಷಣೆಗೆ ಏನೇನು ಮಾಡಬೇಕೆಂಬುದು ಕಮಿಟಿ ರಚಿಸಲು ಚಿಂತಿಸಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಬೆಳೆನಷ್ಟ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಆಯಾಯ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಜನ-ಜಾನುವಾರುಗಳಿಗೆ, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿದೆ ಎಂದರು.