ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಮೂವರ ಸೆರೆ, ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಈ ಸುದ್ದಿಯನ್ನು ಶೇರ್ ಮಾಡಿ

Narendra-Dabholkar'

ಔರಂಗಾಬಾದ್, ಆ.22-ಖ್ಯಾತ ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಬಿಐ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ನಿನ್ನೆ ಮುಂಜಾನೆ ಸಿಬಿಐ ಅಧಿಕಾರಿಗಳು ದಾಭೋಲ್ಕರ್ ಹತ್ಯೆ ಪ್ರಮುಖ ಆರೋಪಿ ಎನ್ನಲಾದ ಸಚಿನ್ ಅಂದುರೆ ಭಾವಮೈದುನನ ಔರಂಗಾಬಾದ್‍ನಲ್ಲಿರುವ ಮನೆ ಮೇಲೆ ದಾಳಿ ಮಾಡಿ ಪಿಸ್ತೂಲ್, ಖಡ್ಗ, ಖುಕ್ರಿ(ನೇಪಾಳ ಚಾಕು) ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್) ಸಿಬ್ಬಂದಿ ಸಹ ಈ ಕಾರ್ಯಾಚರಣೆಯಲ್ಲಿ ಸಿಬಿಐಗೆ ಸಾಥ್ ನೀಡಿದ್ದರು.  2013ರಲ್ಲಿ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಇದೇ ಪಿಸ್ತೂಲ್ ಬಳಸಲಾಗಿತ್ತು ಎಂಬುದು ತನಿಖೆಯಿಂದ ತಿಳಿದು ಬಂದಿದೆ.

Facebook Comments

Sri Raghav

Admin