ಕೊಡಗಿಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ, ನೆರೆ ಸಂತ್ರಸ್ತರಿಗೆ ಮೂಲಸೌಲಭ್ಯ ಕಲ್ಪಿಸುವಂತೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Krishnabyregowda

ಕೊಡಗು, ಆ.23-ಮಳೆ ಅನಾಹುತ ಸಂಭವಿಸಿರುವ ಕೊಡುಗು ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಸಮಾರೋಪಾದಿಯಲ್ಲಿ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸೂಚಿಸಿದ್ದಾರೆ.  ಕೊಡಗು ಜಿಲ್ಲೆಯ ಕುಶಾಲನಗರ ಭಾಗದಲ್ಲಿ ಮಳೆ ಅನಾಹುತದಿಂದ ಸಂಭವಿಸಿರುವ ಭೂ ಕುಸಿತದ ಬಗ್ಗೆ ಪರಿಶೀಲನೆ ನಡೆಸಿದ ನಂತರ ಗ್ರಾಮೀಣಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯರ್ಶಿ ಎಲ್.ಕೆ.ಅತೀಕ್ ಅವರಿಗೆ ಸಮಾರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು. ಸರ್ಕಾರ ಸೂಚಿಸಿರುವ ಪುನರ್ವಸತಿ ಕಡೆಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಸಮಾರೋಪಾದಿಯಲ್ಲಿ ಕೈಗೊಳ್ಳಬೇಕು. ಅಗತ್ಯಕ್ಕಿಂತ ಹೆಚ್ಚಿನ ಹಣವನ್ನು ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ.

ಸಿಬ್ಬಂದಿ ಕೊರತೆ ಉಂಟಾದರೆ ಬೇರೆ ಜಿಲ್ಲೆಗಳಿಂದ ಸಿಬ್ಬಂದಿಗಳನ್ನು ನಿಯೋಜಿಸುವಂತೆಯೂ ಸಚಿವರು ಸೂಚಿಸಿದ್ದಾರೆ. ಇಲಾಖೆ ವತಿಯಿಂದ ಕೈಗೊಳ್ಳುವ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.  ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಳಾಗಿರುವ ರಸ್ತೆ, ಕುಡಿಯುವ ನೀರಿನ ಸಂಪರ್ಕ, ಬೀದಿದೀಪ, ಚರಂಡಿ ಮೊದಲಾದವುಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಅವರು ಪಡೆದರು.

Facebook Comments

Sri Raghav

Admin