ಮುಂದುವರೆದ ಸಿಎಂ ಫ್ಯಾಮಿಲಿ ಟೆಂಪಲ್ ರನ್, ಬ್ರಹ್ಮ ದೇವಾಲಯದಲ್ಲಿ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

CM-Kumaraswamy-n-012

ಬೆಂಗಳೂರು, ಆ.23- ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದನ್ನು ಮುಂದುವರೆಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ರಾಜಸ್ಥಾನದ ಅಜ್ಮೀರ್‍ಗೆ ಭೇಟಿ ನೀಡಿ ಬ್ರಹ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಇಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅಜ್ಮೀರ್‍ಗೆ ತೆರಳಿದರು.

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಪುಷ್ಕರ್‍ಗೆ ಭೇಟಿ ನೀಡಿ ಬ್ರಹ್ಮ ದೇವಾಲಯದಲ್ಲಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಅಜ್ಮೀರ್ ದರ್ಗಾಗೆ ಭೇಟಿ ಚಾದರ ಅರ್ಪಿಸಿದ್ದಾರೆ. ಇತ್ತೀಚೆಗಷ್ಟೇ ಹಾಸನ ಜಿಲ್ಲೆಯ ಹೊಳೆನರಸೀಪುರದ ಹರದನಹಳ್ಳಿಯ ಈಶ್ವರ ದೇಗುಲ ಸಂದರ್ಶಿಸಿ, ಕುಕ್ಕೆ ಸುಬ್ರಹ್ಮಣ್ಯ ಹಾಗು ಧರ್ಮಸ್ಥಳ ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಇದೀಗ ಉತ್ತರ ಭಾರತದ ದೇವಸ್ಥಾನ ಮತ್ತು ದರ್ಗಾಕ್ಕೆ ಭೇಟಿ ನೀಡಿದ್ದಾರೆ.

Facebook Comments

Sri Raghav

Admin