ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯಲ್ಲೂ ಅನ್ಯಾಯವಾಗಿಲ್ಲ : ದೇಶಪಾಂಡೆ

ಈ ಸುದ್ದಿಯನ್ನು ಶೇರ್ ಮಾಡಿ

R-V-Deshapande
ಬಾಗಲಕೋಟೆ, ಆ.23- ಉತ್ತರ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಸಮ್ಮಿಶ್ರ ಸರ್ಕಾರದಿಂದ ಯಾವುದೇ ಅನ್ಯಾಯವಾಗಿಲ್ಲ. ನಾನು ಕೂಡ ಉತ್ತರ ಕರ್ನಾಟಕದವನಲ್ಲವೆ..? ಅಭಿವೃದ್ಧಿಗೆ ಏನಾಗಬೇಕು ಹೇಳಿ, ಅದರ ಬಗ್ಗೆ ಚರ್ಚೆ ಮಾಡೋಣ. ಸಮಗ್ರ ಅಭಿವೃದ್ಧಿಯೇ ಸರ್ಕಾರದ ಧ್ಯೇಯ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆ ನಂತರ ಉಳಿಯುವುದಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ವಿರೋಧ ಪಕ್ಷವಾಗಿ ಅವರು ಈ ರೀತಿ ಮಾತನಾಡುವುದು ಸಹಜ. ಅಧಿಕಾರ ನಡೆಸಬೇಕೆಂಬ ಕನಸು ಕಾಣುತ್ತಿದ್ದಾರೆ ಎಂದರು.
ಚುನಾವಣೆ ಯಾವುದೇ ಇರಲಿ, ಮತದಾರರ ನಿಲುವಿಗೆ ನಾವು ತಲೆ ಬಾಗುವುದು ನಮ್ಮ ಧರ್ಮ ಹಾಗೂ ಕರ್ತವ್ಯ. ಸಮ್ಮಿಶ್ರ ಸರ್ಕಾರಕ್ಕೆ ನಾಡಿನ ಜನ ಅಪೂರ್ವ ಬೆಂಬಲ ಕೊಡುತ್ತಿದ್ದಾರೆ. ಅದೇ ರೀತಿ ಲೋಕಸಭೆ ಚುನಾವಣೆಗೂ ಕೊಡುತ್ತಾರೆ. ಹಾಗಾಗಿ ಹೆಚ್ಚಿನ ಸ್ಥಾನಗಳು ಮೈತ್ರಿ ಸರ್ಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಆ ಭಾಗದ ಜನರಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡಬೇಡಿ. ಕಾಂಗ್ರೆಸ್‍ನ 9 ಮಂದಿ ಶಾಸಕರು ಬಿಜೆಪಿಗೆ ಬರುತ್ತಾರೆ ಎಂಬ ಸಂಸದ ಬಿ.ವೈ.ರಾಘವೇಂದ್ರ ಅವರ ಹೇಳಿಕೆಗೆ ಪ್ರತ್ಯುತ್ತರ ನೀಡಿದ ಸಚಿವರು, ಕೇವಲ 9 ಶಾಸಕರು ಬರುತ್ತಾರೆ ಎಂದು ಹೇಳಿದ್ದಾರೆ. 82 ಅಲ್ವಲ್ಲ ಎಂದು ವ್ಯಂಗ್ಯವಾಡಿದರು. ಅಧಿಕಾರದ ಕನಸು ಕಾಣುತ್ತಿರುವ ಬಿಜೆಪಿಯವರ ಹೇಳಿಕೆ ನನಗೆ ಅಚ್ಚರಿ ತಂದಿದೆ. ಈ ಬಗ್ಗೆ ಹೆಚ್ಚಿಗೆ ಹೇಳುವುದೇನೂ ಬೇಡ ಎಂದರು.

Facebook Comments