ವಾಜಪೇಯಿ ಅಸ್ತಿ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ

ಈ ಸುದ್ದಿಯನ್ನು ಶೇರ್ ಮಾಡಿ

vajapeyi-1
ಬೆಂಗಳೂರು, ಆ.23- ದೀರ್ಘ ಕಾಲದ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾ ಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಆರ್.ಅಶೋಕ್ ಮತ್ತಿತರರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ನಂತರ ಶ್ರೀರಂಗಪಟ್ಟಣ ತಲುಪಿ ಪಶ್ಚಿಮ ವಾಹಿನಿಯಲ್ಲಿ ಸಕಲ ವಿಧಿ ವಿಧಾನಗಳೊಂದಿಗೆ ವಾಜಪೇಯಿ ಅವರ ಅಸ್ತಿ ವಿಸರ್ಜಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ನವದೆಹಲಿಯಿಂದ ತರಲಾಗಿದ್ದ ಅಸ್ತಿಯನ್ನು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ಬರಮಾಡಿಕೊಂಡರು. ನಂತರ ಪಕ್ಷದ ಕೇಂದ್ರ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಇಂದು ಶ್ರೀರಂಗಪಟ್ಟಣ ಸೇರೀದಂತೆ ಪ್ರಮುಖ ನದಿಗಳಲ್ಲಿ ಅಸ್ತಿ ವಿಸರ್ಜನೆ ಮಾಡಲಾಯಿತು.

WhatsApp Image 2018-08-23 at 11.51.20 AM

 

Facebook Comments

Sri Raghav

Admin