ಕೊಡಗಿನಲ್ಲಿ ಡಿಜಿಪಿ ನೀಲಮಣಿ ಎನ್.ರಾಜು ಮೊಕ್ಕಾಂ

ಈ ಸುದ್ದಿಯನ್ನು ಶೇರ್ ಮಾಡಿ

Neelamani--02
ಬೆಂಗಳೂರು, ಆ.24- ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ಎನ್.ರಾಜು ಅವರು ಕೊಡಗಿನಲ್ಲಿ ಮೊಕ್ಕಾಂ ಹೂಡಿದ್ದಾರೆ. ಬೆಂಗಳೂರಿನಿಂದ ನಿನ್ನೆ ಕೊಡಗಿಗೆ ತೆರಳಿದ ಅವರು ಭೂ ಕುಸಿತ ಉಂಟಾದ ಪ್ರದೇಶಗಳು, ನಿರಾಶ್ರಿತ ಕೇಂದ್ರಗಳು ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದಾಗಿ ಉಂಟಾದ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿದರು.

ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿರುವ ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಮಳೆ, ಪ್ರವಾಹದ ವೇಳೆ ಸಂಕಷ್ಟದಲ್ಲಿ ಸಿಲುಕಿದ್ದ ಜನರನ್ನು ತಮ್ಮ ಪ್ರಾಣವನ್ನು ಲೆಕ್ಕಿಸದೆ ರಕ್ಷಿಸಿದಂತಹ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಮಹಾನಿರ್ದೇಶಕರು ಶ್ಲಾಘಿಸಿದ್ದಾರೆ. ಕೊಡಗು ಸಂತ್ರಸ್ತರ ನಿಧಿಗೆ ಪೊಲೀಸ್ ಇಲಾಖೆ ನೆರವು ನೀಡಲು ಮುಂದಾಗಿದ್ದು, ಇಲಾಖೆಯ ಎಲ್ಲಾ ಸಿಬ್ಬಂದಿಯು ಒಂದು ದಿನದ ವೇತನವನ್ನು ನೀಡಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

Facebook Comments

Sri Raghav

Admin