2019ರ ಚುನಾವಣೆ ಬಿಜೆಪಿ-ವಿಪಕ್ಷ ಮೈತ್ರಿಕೂಟ ನಡುವಿನ ಹೋರಾಟ : ರಾಹುಲ್

ಈ ಸುದ್ದಿಯನ್ನು ಶೇರ್ ಮಾಡಿ

Rahul-Election

ಲಂಡನ್, ಆ.25-ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಹಾಗೂ ವಿರೋಧಪಕ್ಷಗಳ ಮೈತ್ರಿಕೂಟದ ನಡುವೆ ಹೋರಾಟ ನಡೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಕಾಂಗ್ರೆಸ್ ಕೈಜೋಡಿಸಲಿದೆ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದಂತಾಗಿದೆ.

ಭಾರತದ ಪ್ರಮುಖ ಪವಿತ್ರ ಸಂಸ್ಥೆಗಳ ಮೇಲೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ವ್ಯವಸ್ಥಿತ ದಾಳಿ ನಡೆಸುತ್ತಿರುವುದರಿಂದ 2019ರ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಈ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಹಾಗೂ ವಿರೋಧಪಕ್ಷಗಳ ನಡುವೆ ನೇರ ಹಣಾಹಣಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಇಂಗ್ಲೆಂಡ್ ಪ್ರವಾಸದಲ್ಲಿರುವ ರಾಹುಲ್ ನಿನ್ನೆ ರಾತ್ರಿ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳು ಹಾಗೂ ಹಿಂದಿನ ವಿದ್ಯಾರ್ಥಿಗಳ ಒಕ್ಕೂಟದ ಸದಸ್ಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.  ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಮಣಿಸುವುದು ಹಾಗೂ ಆ ಪಕ್ಷದಿಂದ ದೇಶದ ಪವಿತ್ರ ಸಂಸ್ಥೆಗಳ ಮೇಲೆ ನಡೆಯುತ್ತಿರುವ ಆಕ್ರಮಣಗಳನ್ನು ತಡೆಗಟ್ಟುವುದು ಕಾಂಗ್ರೆಸ್‍ನ ಪ್ರಥಮಾದ್ಯತೆಯಾಗಿದೆ ಎಂದು ಅವರು ಹೇಳಿದರು.

ಮುಂಬರುವ ಲೋಕಸಭೈ ಚುನಾವಣೆಯಲ್ಲಿ ಏನಿದ್ದರೂ ಬಿಜೆಪಿ ಹಾಗೂ ಪ್ರತಿಪಕ್ಷಗಳ ಮಹಾಘಟ ಬಂಧನ್ ನಡುವೆ ನೇರ ಹೋರಾಟ ನಡೆಯಲಿದೆ. ಒಂದು ಕಡೆ ಬಿಜೆಪಿ ಇದ್ದರೆ, ಮತ್ತೊಂದು ಕಡೆ ಪ್ರತಿಯೊಂದು ವಿರೋಧ ಪಕ್ಷಗಳ ಮಹಾಮೈತ್ರಿ ಕೂಟ ಇರಲಿದೆ. ಭಾರತದ ಸಂವಿಧಾನದ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ. ಇದನ್ನು ತಪ್ಪಿಸಬೇಕು. ಇದೇ ಕಾರಣಕ್ಕಾಗಿ ವಿಪಕ್ಷಗಳು ಒಂದುಗೂಡಲಿವೆ. ಪ್ರಜಾಪ್ರಭುತ್ವ ಮತ್ತು ದೇಶವನ್ನು ರಕ್ಷಿಸಬೇಕೆಂಬುದು ನಮ್ಮ ಉದ್ದೇಶ ಎಂದು ಅವರು ತಿಳಿಸಿದರು.

Facebook Comments

Sri Raghav

Admin