ನಾಡಹಬ್ಬ ದಸರಾ ಉತ್ಸವ ಕುರಿತು ನಾಳೆ ಮಹತ್ವದ ಸಭೆ, ಆ.29ಕ್ಕೆ ಗಜಪಯಣ

ಈ ಸುದ್ದಿಯನ್ನು ಶೇರ್ ಮಾಡಿ

Dasara--01

ಮೈಸೂರು,ಆ.26- ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯು ಇದೇ 28ರಂದು ನಗರದಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 3.30ಕ್ಕೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಸರಾ ಉನ್ನತ ಸಮಿತಿಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಜಿ.ಟಿ.ದೇವೇಗಡ, ಸಿ.ಎಸ್. ಪುಟ್ಟರಾಜು, ಪುಟ್ಟರಂಗ ಶೆಟ್ಟಿ, ಸಾ.ರಾ.ಮಹೇಶ್, ಎನ್.ಮಹೇಶ್, ಡಿ.ಸಿ.ತಮ್ಮಣ್ಣ, ಸಂಸದರಾದ ಪ್ರತಾಪ್ ಸಿಂಹ, ಆರ್.ಧೃವನಾರಾಣ್ ಸೇರಿದಂತೆ ಶಾಸಕರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.  ಕೊಡಗಿನಲ್ಲಿ ಅತಿವೃಷ್ಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಬೇಕು ಅಥವಾ ಸಾಂಪ್ರದಾಯಿಕವಾಗಿ ಆಚರಿಸಬೇಕೆಂಬುದರ ಬಗ್ಗೆ ತೀರ್ಮಾನ ಕೈಕೊಳ್ಳಲಾಗುತ್ತದೆ.

ಆ.29ಕ್ಕೆ ಗಜಪಯಣ:
ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಮೊದಲ ತಂಡ ಆ.29ಕ್ಕೆ ಮೈಸೂರಿಗೆ ಆಗಮಿಸಲಿದೆ.  ಇದೇ 29ರಂದು ಗಜಪಯಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿ ಇರುವ ನಾಗಪುರ ಹಾಡಿಯಿಂದ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ ಕ್ಯಾಪ್ಟನ್ ಅರ್ಜುನ್ ನೇತೃತ್ವದಲ್ಲಿ ಆರು ಆನೆಗಳು ಮೈಸೂರಿಗೆ ಆಗಮಿಸಲಿದೆ. ಈ ಬಗ್ಗೆ 28ರಂದು ಉನ್ನತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

Facebook Comments

Sri Raghav

Admin