ತನ್ನ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಪಾತಕಿ ಬನ್ನಂಜೆ ರಾಜ

ಈ ಸುದ್ದಿಯನ್ನು ಶೇರ್ ಮಾಡಿ

BannajeRaja--101

ಉಡುಪಿ, ಆ.27- ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜ ಇಂದು ಉಡುಪಿಗೆ ಆಗಮಿಸಿ, ತನ್ನ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾನೆ. ಬನ್ನಂಜೆ ರಾಜನ ತಾಯಿ ವಿಲಾಸಿನಿ ಶೆಟ್ಟಿಗಾರ್(78) ಅವರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ವಿಶೇಷ ಅನುಮತಿ ಪಡೆದ ಬನ್ನಂಜೆ ರಾಜ, ಇಂದು ಉಡುಪಿಗೆ ಆಗಮಿಸಿ ಮಲ್ಪೆಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾನೆ.

ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿ ಹಿಂಡಲಾಗ ಜೈಲಿನಿಂದ ಉಡುಪಿ ಹಾಗೂ ಚಿಕ್ಕಮಗಳೂರು ಪೊಲೀಸರು ಬನ್ನಂಜೆ ರಾಜನನ್ನು ಉಡುಪಿಗೆ ಬಿಗಿ ಭದ್ರತೆಯಲ್ಲಿ ಕರೆ ತಂದಿದ್ದಾರೆ. ಪೊಲೀಸ್ ಸುಪರ್ದಿಯಲ್ಲೆ ರಾಜಾ ತನ್ನ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments

Sri Raghav

Admin