ಗೂಗಲ್ ಯಾವತ್ತೂ ಗುರುವಿನ ಸ್ಥಾನಕ್ಕೆ ಬರಲು ಸಾಧ್ಯವಿಲ್ಲ : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಈ ಸುದ್ದಿಯನ್ನು ಶೇರ್ ಮಾಡಿ

Suttur-Mutt

ಮೈಸೂರು, ಆ.28- ಆಧುನಿಕ ಪ್ರಪಂಚದಲ್ಲಿ ನಮಗೆಲ್ಲ ಗೂಗಲ್ ಬಹು ಮುಖ್ಯ. ಆದರೆ ಗೂಗಲ್ ಎಂದಿಗೂ ಗುರುವಿನ ಸ್ಥಾನಕ್ಕೆ ಬರುವುದಿಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ತಿಳಿಸಿದರು. ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿಂದು ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮಿಗಳವರ 103ನೇ ಜಯಂತಿ ಮಹೋತ್ಸವ ಹಾಗೂ ಶ್ರೀ ಚನ್ನವೀರ ದೇಶೀಕೇಂದ್ರ ಗುರುಕುಲದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಿಕ್ಷಣದ ವಿಚಾರದಲ್ಲಿ ಭಾರತ ವಿಶ್ವಕ್ಕೆ ಗುರು ಆಗಿತ್ತು. ನಳಂದ ತಕ್ಷಶಿಲಾ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಪ್ರಪಂಚದ ಮೂಲೆ ಮೂಲೆಗಳಿಂದ ಬಂದು ಕಲಿಯುತ್ತಿದ್ದರು. ಅಂತಹ ಪರಿಸ್ಥಿತಿ ಮತ್ತೆ ಪುನರಾವರ್ತನೆಯಾಗುತ್ತಿದೆ ಎಂದರು.

ಮಠಗಳು ಜಾತಿ, ಮತ, ಲಿಂಗ, ಧರ್ಮ ಭೇದವಿಲ್ಲದೆ ಸಾಮಾಜಿಕ ಸೇವÉಯಲ್ಲಿ ತೊಡಗಿಸಿಕೊಂಡಿವೆ ಎಂದು ಅವರು ಶ್ಲಾಘಿಸಿದರು. ಮಠಗಳು ಶೈಕ್ಷಣಿಕ ವಲಯದಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸುತ್ತಿವೆ. ಅದರಲ್ಲೂ ವೀರಶೈವ ಮಠಗಳ ಸೇವೆ ಅಪಾರವಾದುದು ಎಂದು ಅವರು ಹೇಳಿದರು. ವಿವಿಧತೆಯಲ್ಲಿ ಏಕತೆ ಎಂಬುದು ಭಾರತದ ವಿಶೇಷ. ಇಂತಹ ಆಶಯಗಳಿಗೆ ಮಠಗಳು ಪೂರಕವಾಗಿ ಕೆಲಸ ನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.

# ದೇವೇಗೌಡರನ್ನು ಕೊಂಡಾಡಿದ ಉಪರಾಷ್ಟ್ರಪತಿ:

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಇದೇ ವೇಳೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರನ್ನು ಹಾಡಿ ಹೊಗಳಿದ್ದಾರೆ. ಯಾರೊಬ್ಬರೂ ಸಹ ತಮ್ಮ ಮಾತೃಭೂಮಿಯನ್ನು ಮರೆಯಬಾರದು. ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿ ದೆಹಲಿಗೆ ಬಂದರೂ ಹಾಸನ ಮಾತ್ರ ಬಿಡಲಿಲ್ಲ ಎಂದು ದೇವೇಗೌಡರನ್ನು ಕುರಿತು ವೆಂಕಯ್ಯನಾಯ್ಡು ಶ್ಲಾಘನೀಯ ಮಾತುಗಳನ್ನಾಡಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಪುಟ್ಟರಾಜು, ಸಾ.ರಾ.ಮಹೇಶ್, ಶಾಸಕ ಯತೀಂದ್ರ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin