ಚಾರ್ಮಾಡಿ ಘಾಟ್‍ನಲ್ಲಿ ಮಧ್ಯರಾತ್ರಿ 10 ಕಿ.ಮೀ ಟ್ರಾಫಿಕ್ ಜಾಮ್..!

ಈ ಸುದ್ದಿಯನ್ನು ಶೇರ್ ಮಾಡಿ
ಸಾಂಧರ್ಬಿಕ ಚಿತ್ರ
ಸಾಂಧರ್ಬಿಕ ಚಿತ್ರ

ಚಿಕ್ಕಮಗಳೂರು, ಆ.28- ವೋಲ್ವೋ ಬಸ್ ಕೆಟ್ಟು ನಿಂತ ಪರಿಣಾಮ ಮೂಡಿಗೆರೆ ಜಿಲ್ಲೆಯ ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಮಧ್ಯರಾತ್ರಿ 12ರಿಂದ ಘಾಟ್‍ನಲ್ಲಿ ಸಂಚಾರ ದಟ್ಟಣೆ ಉಂಟಾಗಿ, ಚಾರ್ಮಾಡಿಯಿಂದ ಅಣ್ಣಪ್ಪಸ್ವಾಮಿ ದೇವಾಲಯದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ವಾಹನಗಳು ಸುಮಾರು 10 ಕಿ.ಮೀ ಸಾಲುಗಟ್ಟಿ ನಿಂತಿದ್ದು, ಚಾರ್ಮಾಡಿಯಲ್ಲಿ ಭಾರೀ ವಾಹನಗಳ ನಿಷೇಧವಿದ್ದರೂ, ಘನ ವಾಹನಗಳು ಸಂಚರಿಸುತ್ತಿವೆ. ಕಳಸ-ಕುದುರೆಮುಖ ರಾಜ್ಯ ಹೆದ್ದಾರಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೂ ಭಾರೀ ವಾಹನಗಳು ಚಾರ್ಮಾಡಿ ಘಾಟಿನಲ್ಲಿ ಸಂಚಾರ ಮಾಡುತ್ತಿವೆ. ಇದರಿಂದ ಈ ರಸ್ತೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕೆಲವು ದಿನಗಳ ಹಿಂದೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಆಗಿ ಸುಮಾರು 5 ಕಿ.ಮೀ ವರೆಗೂ ವಾಹನಗಳು ಸಾಲು ಗಟ್ಟಿ ನಿಂತಿತ್ತು. ಪದೇ ಪದೇ ಈ ರಸ್ತೆಯಲ್ಲಿ ಇಂತಹ ಸಮಸ್ಯೆ ಸೃಷ್ಟಿಯಾಗುತ್ತಿದೆ. ಜಿಲ್ಲಾಡಳಿತ ಸಮಸ್ಯೆ ನಿವಾರಣೆಗೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.  ಗುಡ್ಡಗಳ ಕುಸಿತದಿಂದ ಶಿರಾಡಿಘಾಟ್ ಬಂದ್ ಆಗಿರುವ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸಲು ಚಾರ್ಮಾಡಿಘಾಟ್ ಒಂದೇ ಮಾರ್ಗ ಇರುವುದರಿಂದ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸಬೇಕಿದೆ. ಈಗ ಟ್ರಾಫಿಕ್ ಜಾಮ್‍ನಿಂದ ಪ್ರಯಾಣಿಕರು ಹೈರಾಣಾಗಿದ್ದಾರೆ.

Facebook Comments