ಪ್ರವಾಹ ಪೀಡಿತರರಿಗಾಗಿ ಸುತ್ತೂರು ಮಠದದಿಂದ 50 ಲಕ್ಷ ರೂ. ನೆರವು

ಈ ಸುದ್ದಿಯನ್ನು ಶೇರ್ ಮಾಡಿ

Suttur-Mutt
ಮೈಸೂರು, ಆ.28- ಕೊಡಗು ಸೇರಿದಂತೆ ಅತೀವೃಷ್ಟಿಗೀಡಾಗಿರುವ ಪ್ರದೇಶಗಳ ಜನರ ನೆರವಿಗಾಗಿ ಸುತ್ತೂರು ಮಠದ ವತಿಯಿಂದ 50 ಲಕ್ಷ ರೂ. ದೇಣಿಗೆಯನ್ನು ನೀಡಲಾಗಿದೆ. ಸುತ್ತೂರು ಮಠದ ಆವರಣದಲ್ಲಿ ನಡೆದ ಶ್ರೀ ಚನ್ನವೀರ ದೇಶೀಕೇಂದ್ರ ಗುರುಕುಲ ಕಟ್ಟಡದ ಉದ್ಘಾಟನೆ, ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವರ 103ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಮಠಾಧೀಶರಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರು ಚೆಕ್ಕನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಅನ್ನ, ಅಕ್ಷರ ದಾಸೋಹ ನೀಡುತ್ತಿರುವ ಸುತ್ತೂರು ಕ್ಷೇತ್ರ ಬೃಹತ್ ಧಾರ್ಮಿಕ ಕ್ಷೇತ್ರವೂ ಆಗಿದೆ. ಶ್ರೀ ಕ್ಷೇತ್ರದ ಸ್ವಾಮೀಜಿ ಅವರು ಕೊಡಗು ಜಿಲ್ಲೆಯ ಅನಾಹುತಕ್ಕೆ 50 ಲಕ್ಷ ರೂ. ದೇಣಿಗೆಯನ್ನು ನೀಡಿದ್ದಾರೆ. ಅಲ್ಲದೆ, ಕೇರಳ ನೆರೆ ಸಂತ್ರಸ್ತರ ನೆರವಿಗೂ 10 ಲಕ್ಷ ರೂ. ಚೆಕ್ ನೀಡಲಾಗಿದೆ.
ತಮಿಳುನಾಡಿನಲ್ಲಿ ಸುನಾಮಿ ಸಂಭವಿಸಿದಾಗಲೂ ರಾಜ್ಯ ಸ್ಪಂದಿಸಿತ್ತು.

ಕೊಡಗು, ಕೇರಳ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತಿತರ ಕಡೆಗಳಲ್ಲಿ ಅತಿವೃಷ್ಟಿಯಿಂದ ಜನರು ಸಂಕಷ್ಟದಲ್ಲಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಚಾಮುಂಡೇಶ್ವರಿ ಕೃಪೆಯಿಂದ ಮಳೆ, ಬೆಳೆಯಾಗಿ ನಾಡಿನ ಜನತೆ ನೆಮ್ಮದಿಯಿಂದ ಬದುಕುವಂತಾಗಬೇಕೆಂದು ಕೋರಿದರು. ಸುತ್ತೂರು ಮಠ ದೇಶ-ವಿದೇಶದಲ್ಲಿ ಉತ್ತಮ ಹೆಸರು ಪಡೆದಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿದೆ. ಸುತ್ತೂರು ಮಠಕ್ಕೆ ವಿಶೇಷವಾದ ಸ್ಥಾನಮಾನವಿದೆ. ಸುತ್ತೂರು ಮಠಕ್ಕೂ ನಮ್ಮ ಕುಟುಂಬಕ್ಕೂ ಗುರು-ಶಿಷ್ಯರ ಸಂಬಂಧವಿದೆ ಎಂದು ಹೇಳಿದರು.

ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಸಚಿವರಾದ ಸಾ.ರಾ.ಮಹೇಶ್, ಪುಟ್ಟರಂಗಶೆಟ್ಟಿ, ಜಿ.ಟಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯಾ, ಎಚ್.ವಿಶ್ವನಾಥ್, ಶಾಸಕ ಡಾ.ಯತೀಂದ್ರ ಮತ್ತಿತರರು ಪಾಲ್ಗೊಂಡಿದ್ದರು.

Facebook Comments

Sri Raghav

Admin