ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಹೆಡ್‍ಕಾನ್‍ಸ್ಟೆಬಲ್ ಸಸ್ಪೆಂಡ್

ಈ ಸುದ್ದಿಯನ್ನು ಶೇರ್ ಮಾಡಿ

Police-01

ತುಮಕೂರು, ಆ.29-ಮಹಿಳಾ ಸಹೋದ್ಯೋಗಿಗಳ ಜೊತೆ ಅನುಚಿತ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಹೆಡ್‍ಕಾನ್‍ಸ್ಟೆಬಲ್ ಸುದರ್ಶನ್ ಎಂಬುವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಬಡವುನಹಳ್ಳಿ ಪೊಲೀಸ್ ಠಾಣೆಯಿಂದ ಶಿರಾಕ್ಕೆ ವರ್ಗಾವಣೆಗೊಂಡಿದ್ದ ಸುದರ್ಶನ್ ಕಳೆದ ಎರಡೂವರೆ ವರ್ಷಗಳಿಂದ ಇಲ್ಲೇ ಕೆಲಸ ನಿರ್ವಹಿಸುತ್ತಿದ್ದರು. ಮಹಿಳಾ ಸಹೋದ್ಯೋಗಿಗಳ ಜೊತೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ಅಲ್ಲಿನ ಇನ್ಸ್‍ಪೆಕ್ಟರ್ ಮತ್ತು ಡಿವೈಎಸ್ಪಿ ಅವರಿಗೆ ಮಹಿಳಾ ಪೊಲೀಸರು ದೂರು ನೀಡಿದ್ದರು.

ಈ ಬಗ್ಗೆ ತನಿಖೆ ನಡೆಸಿದ ಡಿವೈಎಸ್ಪಿ ವೆಂಕಟೇಶ್ ನಾಯ್ಡು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ನೀಡಿದ್ದರು. ವರದಿಯನ್ನು ಪರಿಶಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಗೋಪಿನಾಥ್ ಅವರು ಅಮಾನತು ಆದೇಶ ಹೊರಡಿಸಿ ಹೆಚ್ಚಿನ ತನಿಖೆಗೆ ಆದೇಶಿಸಿದ್ದಾರೆ.

Facebook Comments

Sri Raghav

Admin