ಮೈತ್ರಿ ಸರ್ಕಾರ ಯಶಸ್ವಿಯಾಗಿ 5 ವರ್ಷ ಪೂರೈಸುತ್ತೆ : ಮಧುಬಂಗಾರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

MAdhu-Bangarappa

ಶಿವಮೊಗ್ಗ, ಆ.29-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಐದು ವರ್ಷ ಪೂರ್ಣಾವಧಿ ಪೂರೈಸಲಿದೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ. ವಿರೋಧಿಗಳಿಗೆ ಇನ್ನೂ ಐದು ವರ್ಷಗಳ ಕಾಲ ರಾಜ್ಯ ಸರ್ಕಾರ ಬೀಳುತ್ತೆ ಎಂದು ಹೇಳುವುದೇ ಕೆಲಸವಾಗಲಿದೆ ಎಂದು ಟೀಕಿಸಿದರು.

ಮುಂದಿನ ಲೋಕಸಭೆ ಚುನಾವಣೆಗೆ ಅಗತ್ಯ ಸಿದ್ಧತೆಯನ್ನು ಜೆಡಿಎಸ್ ಪಕ್ಷ ಮಾಡಿಕೊಳ್ಳುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿಯಾಗ್ಠುವ ಸಾಧ್ಯತೆ ಇದೆ. ರಾಷ್ಟ್ರ ಮಟ್ಟದಲ್ಲಿ ರಾಷ್ಟ್ರೀಯ ನಾಯಕರಾದ ಮಾಯಾವತಿ, ಮುಲಾಯಮ್‍ಸಿಂಗ್ ಯಾದವ್ ಸೇರಿದಂತೆ ಹಲವು ನಾಯಕರು ಮೈತ್ರಿ ಕುರಿತು ಆಲೋಚನೆಗಳನ್ನು ನಡೆಸುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ಚುನಾವಣಾ ಪೂರ್ವ ಮೈತ್ರಿಯಾಗುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿರ್ಧಾರ ಕೈಗೊಳ್ಳಲಿದ್ದಾರೆ. ಆದರೆ ಅವರು ಮೈತ್ರಿ ಆಗುತ್ತೋ, ಬಿಡುತ್ತೋ ಚುನಾವಣೆಗೆ ಸಿದ್ಧರಾಗಿ ಎಂದು ಸೂಚಿಸಿದ್ದಾರೆ ಎಂದು ಹೇಳಿದರು.  ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕಳೆದ ವಿಧಾನಸಭೆಯಲ್ಲಿ ತಾವು ಸೋತಿರುವುದು ದೊಡ್ಡದಲ್ಲ ಎಂದರು. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ ಎಂದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

Facebook Comments

Sri Raghav

Admin