ಎನ್‍ಕೌಂಟರ್’ನಲ್ಲಿ ಇಬ್ಬರು ಹಿಜ್ಬುಲ್ ಉಗ್ರರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Encounter

ಶ್ರೀನಗರ, ಆ.29-ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳ ಉಪಟಳ ಹತ್ತಿಕ್ಕುವ ಕಾರ್ಯಾಚರಣೆಯನ್ನು ಭಾರತೀಯ ಯೋಧರು ತೀವ್ರಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಯೋಧರೊಂದಿಗೆ ಇಂದು ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಹಿಜ್‍ಬುಲ್ ಮುಜಾಹಿದ್ದೀನ್(ಎಚ್‍ಎಂ) ಭಯೋತ್ಪಾದನೆ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಅನಂತನಾಗ್ ಜಿಲ್ಲೆಯ ಖಾನಾಬಲ್ ಪ್ರದೇಶದ ಮುನಿವಾರ್ಡ್ ಗ್ರಾಮಕ್ಕೆ ಉಗ್ರಗಾಮಿಗಳು ನುಸುಳಿ ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಇಂದು ಮುಂಜಾನೆ ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದಾಗ ಎನ್‍ಕೌಂಟರ್ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಗುಂಡಿನ ಕಾಳಗದಲ್ಲಿ ಇಬ್ಬರು ಎಚ್‍ಎಂ ಉಗ್ರರು ಹತರಾಗಿದ್ದು, ರೈಫಲ್‍ಗಳು, ಬುಲೆಟ್‍ಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿ ವೇಳೆ ಪರಾರಿಯಾಗಿರಬಹುದಾದ ಇತರ ಉಗ್ರಗಾಮಿಗಳಿಗಾಗಿ ಆ ಪ್ರದೇಶದಲ್ಲಿ ತೀವ್ರ ಶೋಧ ಮುಂದುವರಿದಿದೆ.

Facebook Comments

Sri Raghav

Admin