ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..!

ಈ ಸುದ್ದಿಯನ್ನು ಶೇರ್ ಮಾಡಿ

Govt-Employee-Salary

ನವದೆಹಲಿ, ಆ.29- ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ)ಯನ್ನು ಹೆಚ್ಚುವರಿಯಾಗಿ ಶೇ.2ರಷ್ಟು ಹೆಚ್ಚಿಸಲು ಇಂದು ನಡೆದ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ. 2018ರ ಜುಲೈ 1ರಿಂದ ಜಾರಿಗೆ ಬರುವಂತೆ ಈ ಹೆಚ್ಚಳ ಅನ್ವಯವಾಗಲಿದೆ.

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಶೇ.2ರಷ್ಟು ಹೆಚ್ಚಳ ಮಾಡುವುದರಿಂದ ದೇಶ 1.1 ಕೋಟಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೆರವಾಗಲಿದೆ.  ಈ ಹೆಚ್ಚಳದಿಂದ ಕೇಂದ್ರ ಸರ್ಕಾರದ ಮೇಲೆ ವಾಷ್ಕಿ 6,112.20 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ.2018-19ರಲ್ಲಿ( 8 ತಿಂಗಳ ಅವಧಿ) 4,074.80 ಕೋಟಿ ರೂ. ಬೊಕ್ಕಸಕ್ಕೆ ಹೊರೆಯಾಗಲಿದೆ.

DA--01

Facebook Comments

Sri Raghav

Admin